10ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು 10ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 22 ರಿಂದ ಮಾರ್ಚ್ 1 ರವರೆಗೆ ಮಹಾನಗರದಲ್ಲಿ ನಡೆಯಲಿದೆ. ಫೆ.22ರಂದು ವಿಧಾನಸೌಧ ಮುಂಭಾಗದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಚಿತ್ರರಂಗ ಸಕಲ ರೀತಿಯಲ್ಲಿ ಸಜ್ಜಾಗಿದೆ.
ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು 5 ವಿಭಾಗಗಳನ್ನಾಗಿ ವಿಂಗಡಿಸಲಾಗಿದೆ. ಸ್ಪರ್ಧಾ ವಿಭಾಗ, ಏಷಿಯನ್ ಚಿತ್ರಗಳ ಸ್ಪರ್ಧೆ, ಭಾರತೀಯ ಚಿತ್ರಗಳು, ಕನ್ನಡ ಚಿತ್ರಗಳು ಮತ್ತು ಕನ್ನಡ ಜನಪ್ರಿಯ ಚಿತ್ರಗಳು ವಿಭಾಗಗಳಲ್ಲಿ ಸಿನಿಮಾ ಪ್ರದರ್ಶನ ನಡೆಯಲಿದೆ.
60 ರಾಷ್ಟ್ರಗಳ ಒಟ್ಟು 200 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ನಗರದ ರಾಜಾಜಿನಗರದ ಒರಾಯನ್ ಮಾಲ್ ನ ಪಿವಿಆರ್, ಕಲಾವಿದರ ಸಂಘದ ಸ್ಕ್ರೀನ್ನಲ್ಲಿ ಚಿತ್ರ ಪ್ರದರ್ಶನ ನಡೆಯಲಿದೆ.
ಚಲನಚಿತ್ರೋತ್ಸವ ಕುರಿತು ವಿವರ ನೀಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರ ಸಿಂಗ್ಬಾಬು ”60 ವಿವಿಧ ದೇಶಗಳ ಸುಮಾರು 200 ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಲಿದೆ. ಚಿತ್ರೋತ್ಸವದಲ್ಲಿ ಏಷ್ಯನ್ ಸಿನಿಮಾಗಳ ವಿಭಾಗದಲ್ಲಿ 13 ಚಿತ್ರಗಳು, ಇಂಡಿಯನ್ ಸಿನಿಮಾ ವಿಭಾಗದಲ್ಲಿ 14 ಚಿತ್ರಗಳು, ಕನ್ನಡ ಸಿನಿಮಾ ವಿಭಾಗದಲ್ಲಿ ತುಳು ಭಾಷೆಯ ಚಿತ್ರ ಸೇರಿ 12 ಚಿತ್ರಗಳು ಮತ್ತು ಕನ್ನಡ ಮನರಂಜನೆ ಚಿತ್ರ ವಿಭಾಗದಲ್ಲಿ 8 ಚಿತ್ರಗಳು ಪ್ರದರ್ಶನವಾಗಲಿವೆ.
ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ, ಅಂತರಾಷ್ಟ್ರೀಯ ಚಲನಚಿತ್ರಗಳ ಪ್ರತಿನಿಧಿಗಳು, ನಿರ್ಮಾಪಕರು ಭಾಗಿಯಾಗಲಿದ್ದಾರೆ. ಮಾರ್ಚ್ 1 ರಂದು ವಿಧಾನಸೌಧದ ಬ್ಯಾಂಕೆಟ್ ಹಾಲ್ ನಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಆ ದಿನ ರಾಜ್ಯಪಾಲ ವಜುಬಾಯ್ ವಾಲಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿರುವ ಕನ್ನಡ ಚಿತ್ರಗಳು
1. ಭರ್ಜರಿ
2. ಚಮಕ್
3. ಕಾಲೇಜು ಕುಮಾರ
4. ಹೆಬ್ಬುಲಿ
5. ಒಂದುಮೊಟ್ಟೆಯಕಥೆ
6. ಮುಫ್ತಿ
7. ರಾಜ್‌ಕುಮಾರ್