flixOye
Buzz

ಸಪ್ತಪದಿ ತುಳಿದ ನಟಿ ಮಯೂರಿ..

ಸ್ಯಾಂಡಲ್ ವುಡ್ ನಟಿ ಮಯೂರಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ.

ರಾತ್ರಿ 2.30ರಿಂದ 3 ಗಂಟೆಯ ಬ್ರಾಹ್ಮೀ ಮುಹೂರ್ತದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಕೇವಲ ನಟಿ ಮಯೂರಿ ಹಾಗೂ ಅರುಣ್ ಅವರ ಕುಟುಂಬಸ್ಥರು ಭಾಗಿಯಾಗಿದ್ದರು.

https://www.instagram.com/p/CBUsFWJgkLh/?igshid=1bot1mfzck7i5

ಸುಮಾರು 10 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಮಯೂರಿ ಹಾಗೂ ಅರುಣ್ ಕುಮಾರ್ ಇದೀಗ ಎರಡೂ ಮನೆಯವರ ಒಪ್ಪಿಗೆಯನ್ನು ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಸಂಬಂಧಿತ · Related