flixOye
Buzz

“ಗೋರಿ” ಪ್ರೀತಿಯ ಸಮಾಧಿ ಸಿನಿಮಾಗೆ ಸೆನ್ಸಾರ್ ಬೋರ್ಡ್‌ನಿಂದ ಗ್ರೀನ್ ಸಿಗ್ನಲ್

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸದ್ದು ಮಾಡಿದ್ದ ‘ಗೋರಿ’ ಚಿತ್ರಕ್ಕೆ ಸೆನ್ಸಾರ್ ಬೋರ್ಡ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ‘ಗೋರಿ’ ಪ್ರೀತಿಯ ಸಮಾಧಿ ಎಂಬ ಟ್ಯಾಗ್‌ಲೈನ್ ಹೊಂದಿರುವ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯಾವುದೇ ಕಟ್ ಅಥವಾ ಮ್ಯೂಟ್ ಇಲ್ಲದೆ ಯು/ಎ ಸರ್ಟಿಫಿಕೇಟ್ ನೀಡಿದೆ.

ಈಗಾಗಲೇ ಸಿನಿಮಾದ ಟ್ರೈಲರ್ ಹಾಗು ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದೆ. ‘ಬ್ಯಾರೆನೆ ಐತಿ’ ಸಾಂಗ್ ಕೇಳಿದ ಪ್ರೇಕ್ಷಕರು ಫುಲ್ ಫಿದಾ ಆಗಿದ್ದಾರೆ.

ಇನ್ನು ಈ ಸಿನಿಮಾಗೆ ನಾಯಕ ನಟನಾಗಿ ಸಿನಿಮಾ ಪತ್ರಕರ್ತ ಕಿರಣ್ ಕಾಣಿಸಿಕೊಂಡಿದ್ದಾರೆ. ಗೋಪಾಲ್ ಕೃಷ್ಣ ಅವರೇ ಚಿತ್ರ ಕಥೆ,ಸಂಭಾಷಣೆ ಬರೆದಿದ್ದಾರೆ. ‘ಗೋರಿ’ ಪಕ್ಕಾ ಲವ್ ಸ್ಟೋರಿ ಹೊಂದಿರುವ ಸಿನಿಮಾ. ಜೊತೆಗೆ ಸ್ನೇಹಿತರ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಲು ನಿರ್ದೇಶಕ ಗೋಪಾಲ್ ಕೃಷ್ಣ ಹೊರಟಿದ್ದು, ಚಿತ್ರದ ಮೇಲೆ ಭರವಸೆ ವ್ಯಕ್ತಪಡಿಸಿದ್ದಾರೆ. ಉತ್ತರ ಕರ್ನಾಟಕದ ಹುಡುಗರ ಚೊಚ್ಚಲ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯ ದೇಶದಲ್ಲಿ ಲಾಕ್‌ಡೌನ್ ಇರುವುದರಿಂದ ಕೇಂದ್ರ ಸರ್ಕಾರ ಥಿಯೇಟರ್ ತೆರೆಯಲು ಅವಕಾಶ ನೀಡಿಲ್ಲ. ಎಲ್ಲವೂ ಸರಿ ಹೋದಲ್ಲಿ ಆಗಸ್ಟ್ ಅಂತ್ಯದ ವೇಳೆಗೆ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಸಂಬಂಧಿತ · Related