flixOye
Buzz

‘ಜೇಮ್ಸ್’ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಬಹುಭಾಷಾ ನಟ ಮುಖೇಶ್ ರಿಷಿ

ಪುನೀತ್ ರಾಜ್‍ಕುಮಾರ್ ನಟಿಸುತ್ತಿರುವ ‘ಜೇಮ್ಸ್’ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಬಳ್ಳಾರಿ, ಹೊಸಪೇಟೆ ಸುತ್ತಮುತ್ತ ಶೂಟಿಂಗ್ ಮುಗಿಸಿಕೊಂಡಿರುವ ಚಿತ್ರತಂಡ ನವೆಂಬರ್ 25 ರಂದು ಬೆಂಗಳೂರಿನಲ್ಲಿ ಜೇಮ್ಸ್ ಸಿನಿಮಾದ ಶೂಟಿಂಗ್ ಮತ್ತೆ ಶುರುವಾಗಲಿದೆ. ಜೇಮ್ಸ್ ಚಿತ್ರದಲ್ಲಿ ಹಿಂದಿ, ತೆಲುಗು, ತಮಿಳು, ಕನ್ನಡ, ಬೆಂಗಾಳಿ, ಬೋಜ್ ಪುರಿ ಹೀಗೆ ಹಲವು ಚಿತ್ರಗಳಲ್ಲಿ ನಟಿಸಿರುವ ಬಹುಭಾಷಾ ನಟ ಮುಖೇಶ್ ರಿಷಿ ‘ಜೇಮ್ಸ್’ ನಲ್ಲಿ ಮೂರನೇ ಹಂತದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂಬ ಮಾಹಿತಿ ಚಿತ್ರತಂಡದಿಂದ ಹೊರಬಿದ್ದಿದೆ.

ಬಹದ್ದೂರ್, ಭರ್ಜರಿ ಚಿತ್ರಗಳ ನಿರ್ದೇಶಕ ಚೇತನ್ ಕುಮಾರ್ ‘ಜೇಮ್ಸ್’ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕಿಶೋರ್ ಪತ್ತಿಕೊಂಡ ನಿರ್ಮಾಣ ಮಾಡುತ್ತಿದ್ದಾರೆ. ‘ರಾಜಕುಮಾರ್’ ಚಿತ್ರದಲ್ಲಿ‌ ಪುನೀತ್ ರಾಜ್ ಕುಮಾರ್ ಗೆ ಜೊತೆಯಾಗಿದ್ದ ಪ್ರಿಯಾ ಆನಂದ್ ಈ ಚಿತ್ರದಲ್ಲೂ ಒಂದಾಗಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಅನುಪ್ರಭಾಕರ್, ತೆಲುಗು ನಟ ಶ್ರೀಕಾಂತ್, ಆದಿತ್ಯ ಮೆನನ್ ಚಿತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿತ · Related