flixOye
Buzz

ರಿಷಬ್ ಶೆಟ್ಟಿ ನಾಯಕನಾಗಿರುವ ‘ಹೀರೋ’ ಚಿತ್ರದ ಟ್ರೇಲರ್ ಬಿಡುಗಡೆ

ಆ್ಯಕ್ಷನ್ ಹೀರೋ ಆಗಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿರುವ ‘ಹೀರೋ’ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಈ ಚಿತ್ರ ಚಿತ್ರೀಕರಣ ಮುಗಿಸಿಕೊಂಡು ತೆರೆಗೆ ಬರಲು ಸಜ್ಜಾಗಿದೆ. ಚಿತ್ರದಲ್ಲಿ ನಾಯಕಿಯಾಗಿ ಗಾನವಿ ಲಕ್ಷ್ಮಣ್ ಕಾಣಿಸಿಕೊಂಡಿದ್ದು, ಖಳನಾಯಕನಾಗಿ ಪ್ರಮೋದ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕಾಮಿಡಿ ಥ್ರಿಲ್ಲರ್ ಚಿತ್ರವಾಗಿರುವ ‘ಹೀರೋ’ ಚಿಕ್ಕಮಂಗಳೂರಿನಲ್ಲಿ 50 ದಿನಗಳಲ್ಲಿ ಚಿತ್ರೀಕರಣ ಮುಗಿಸಿಕೊಂಡಿದೆ. ಇದೀಗ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, 6 ಗಂಟೆಗಳಲ್ಲಿ 1.7ಲಕ್ಷ ಜನ ನೋಡಿ, 38 ಸಾವಿರಕ್ಕೂ ‌ಹೆಚ್ಚು ಜನ ಇಷ್ಟಪಟ್ಟಿದ್ದಾರೆ.

ಸಂಬಂಧಿತ · Related