flixOye
Buzz

ರೆಬಲ್ ಸ್ಟಾರ್ ಅಂಬರೀಷ್ ಇನ್ನಿಲ್ಲ..!

ಉಸಿರಾಟದ ತೊಂದರೆಯಿಂದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ ರೆಬಲ್ ಸ್ಟಾರ್ ಅಂಬರೀಶ್

ನಟ, ರಾಜಕಾರಣಿ ರೆಬಲ್ ಸ್ಟಾರ್ ಅಂಬರೀಷ್(66) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಿಡ್ನಿ, ಶ್ವಾಸಕೋಶದ ಸಮಸ್ಯೆ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅಂಬರೀಷ್ ಅವರನ್ನು ಇಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅಂಬರೀಷ್ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸಂಜೆ ಮನೆಯಲ್ಲಿ ಕುಸಿದು ಬಿದ್ದ ಅಂಬರೀಶ್ ರನ್ನು ಕುಟುಂಬದ ಸದಸ್ಯರು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಾಗಲೇ ಉಸುರಾಟದ ಸಮಸ್ಯೆ ಮತ್ತು ಕಿಡ್ನಿ‌ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ಅವರಿಗೆ ವಿಕ್ರಂ ಆಸ್ಪತ್ರೆಯ ಡಾ.ಸತೀಶ್ ಅವರ ತಂಡ ಚಿಕಿತ್ಸೆ ನೀಡಲು ಸತತ ಪ್ರಯತ್ನ‌ ನಡೆಸಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಂಬರೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ.

ಸಂಬಂಧಿತ · Related