ಯೂಟ್ಯೂಬ್‍ನಲ್ಲಿ `ಹೈಪರ್’ ಚಿತ್ರದ ಟ್ರೇಲರ್‍ಗೆ ಉತ್ತಮ ಪ್ರತಿಕ್ರಿಯೆ

Published on

413 Views

ಯೂಟ್ಯೂಬ್‍ನಲ್ಲಿ `ಹೈಪರ್’ ಚಿತ್ರದ ಟ್ರೇಲರ್‍ಗೆ ಉತ್ತಮ ಪ್ರತಿಕ್ರಿಯೆ

ಎಂ.ಬಿಗ್ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಕಾರ್ತಿಕ್ ಅವರು ನಿರ್ಮಿಸಿರುವ `ಹೈಪರ್` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಮೇ ತಿಂಗಳಲ್ಲಿ ತೆರೆಗೆ ಬರಲಿದೆ. ಕೆಲವು ದಿನಗಳ ಹಿಂದೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್‍ನಲ್ಲಿ 23ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ ಚಿತ್ರತಂಡ ಸಂತಸಪಟ್ಟಿದೆ.

ಅರ್ಜುನ್ ಆರ್ಯ ಕಥೆ ಬರೆದಿರುವ ಈ ಚಿತ್ರವನ್ನು ಗಣೇಶ್ ವಿನಾಯಕ್ ನಿರ್ದೇಶಿಸಿದ್ದಾರೆ. ತಮಿಳಿನಲ್ಲಿ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ಗಣೇಶ್ ಅವರಿಗೆ ಕನ್ನಡದಲ್ಲಿಇದು ಮೊದಲ ಚಿತ್ರ. ಕಾಲೇಜ್ ಲವ್ ಸ್ಟೊರಿ ಹಾಗೂ ಅಪ್ಪ- ಮಗಳ ಭಾಂಧವ್ಯದ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಇಮ್ಮಾನ್.ಡಿ ಹಾಗೂ ಎಲ್ವಿನ್ ಸಂಗೀತ ನೀಡಿದ್ದಾರೆ. ಶಕ್ತಿವೇಲ್ ಅವರ ಛಾಯಾಗ್ರಹಣ, ರುಬಾನ್ ಸಂಕಲನ, ಥ್ರಿಲ್ಲರ್ ಮಂಜು, ಮಾಸ್ ಮಾದ, ವಿಕ್ರಂ, ಹೈಪರ್ ಸೂರಿ ಸಾಹಸ ನಿರ್ದೇಶನ, ಕÀಲೈ ನೃತ್ಯ ನಿರ್ದೇಶನ ಹಾಗೂ ಕನಕ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಎ.ಪಿ.ಅರ್ಜುನ್, ಬಹದ್ದೂರ್ ಚೇತನ್, ದಿಲ್‍ವಾಲ ಅನಿಲ್ ಹಾಗೂ ಗೌಸ್‍ಫಿûರ್ ಬರೆದಿದ್ದಾರೆ. ಅರ್ಜುನ್ ಆರ್ಯ, ಶೀಲ, ರಂಗಾಯಣ ರಘು, ಶೋಭ್‍ರಾಜ್, ಬುಲೆಟ್ ಪ್ರಕಾಶ್, ಅಚ್ಯುತಕುಮಾರ್, ಶ್ರೀನಿವಾಸಪ್ರಭು, ಬ್ಯಾಂಕ್ ಜನಾರ್ದನ್, ವೀಣಾಸುಂದರ್, ಲಕ್ಷ್ಮೀಸಿದ್ದಯ್ಯ, ಉಮೇಶ್ ಪುಂಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com