“ಆ ಒಂದು ದಿನ”

Published on

568 Views
Advertisement

“ಆ ಒಂದು ದಿನ”

ಒಂದು ಸಿನಿಮಾ ನಿರ್ಮಾಣ ಮಾಡುವುದು ಎಂದರೆ ಅಷ್ಟು ಸುಲಭದ ಮಾತಲ್ಲ. ಆದರೆ ಇಂತಹ ಸಾಹಸವನ್ನು ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರ ಒಬ್ಬರು ಮಾಡಿದ್ದಾರೆ. ಮೂಲತಃ ಕೃಷಿಕರಾಗಿದ್ದ ರವೀಂದ್ರ ಗೌಡ ಪಾಟೀಲ್ ‘ಆ ಒಂದು ದಿನ’ ಎಂಬ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ದೇಶಕ್ಕೆ ಏನಾದರೂ ಮಾಡಬೇಕು ಎಂಬ ಆಸೆ ಹೊಂದಿದ್ದ ಇವರು ಒಂದು ಸಿನಿಮಾ ಮಾಡಿ ಅದರ ಮೂಲಕ ಒಂದು ಒಳ್ಳೆಯ ಸಂದೇಶವನ್ನು ಹೇಳುವ ಪ್ರಯತ್ನ ಮಾಡಿದ್ದಾರೆ. ಇಂದಿನ ರಾಜಕೀಯ ವ್ಯವಸ್ಥೆ ಹಾಳಾಗಿದೆ, ಪ್ರಜಾಪ್ರಭುತ್ವವನ್ನು ಪ್ರಜೆಗಳೆ ಸರಿ ಮಾಡಬೇಕು ಎನ್ನುವ ಇವರು ತಮ್ಮ ‘ಆ ಒಂದು ದಿನ’ ಸಿನಿಮಾ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ ಕೂಡ ಅವರೇ ಬರೆದಿದ್ದಾರೆ.

Advertisement

ಇದೇ ಫೆಬ್ರವರಿ 2 ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಒಂದು ಹಳ್ಳಿ, ಆ ಹಳ್ಳಿಯಲ್ಲಿ ನಡೆಯುವ ಚುನಾವಣೆಯ ಭರಾಟೆ. ಅಲ್ಲಿನ ಗೌಡರ ನಡುವೆ ನಡೆಯುವ ಜಿದ್ದಾ ಜಿದ್ದಿ ಸ್ಪರ್ಧೆ. ಹಳ್ಳಿಯಲ್ಲಿರುವ ಎರಡು ಬಣಗಳ ನಡುವೆ ಇರುವ ಭಿನ್ನಾಭಿಪ್ರಾಯಗಳು ಏನೆಲ್ಲ ಅನಾಹುತಗಳಿಗೆ ಎಡೆಮಾಡಿಕೊಡುತ್ತದೆ ಎನ್ನುವುದೇ ಚಿತ್ರದ ತಿರುಳು. ಇವೆಲ್ಲವೂ ಚಿತ್ರದ ಕಥೆಯಲ್ಲಿ ಅಡಕವಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹದೊಂದು ಸಿನಿಮಾ ರಿಲೀಸ್ ಆಗುತ್ತಿರುವುದು, ಜನರ ಮೇಲೆ ಎಷ್ಟರ ಮಟ್ಟಿಗೆ ಪ್ರಭಾವ ಬೀರುತ್ತೋ ಗೊತ್ತಿಲ್ಲ. ಆದ್ರೆ, ಈ ಚಿತ್ರದಿಂದ ಜನರಲ್ಲಿ ರಾಜಕೀಯದ ಬಗ್ಗೆ ಹೊಸ ಭಾವನೆ ಮೂಡಬೇಕು ಎನ್ನುವುದು ಚಿತ್ರತಂಡದ ಆಶಯ.
ಧಾರವಾಡ ಮೂಲದ ಬಾಂಬೆಯಲ್ಲಿ ಡಾನ್ಸರ್ ಆಗಿರುವ ಸಿಮ್ರಾನ್ ಚಿತ್ರದ ನಾಯಕಿ. ದ್ರಾಕ್ಷಿ ಬೆಳೆಗಾರ ರವೀಂದ್ರಗೌಡ ಎನ್‌.ಪಾಟೀಲ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡಿದ್ದಾರೆ. ಇನ್ನುಳಿದಂತೆ ಚಿತ್ರದಲ್ಲಿ ಎಲ್ಲ ಹೊಸ ಕಲಾವಿದರೇ ಅಭಿನಯಿಸಿದ್ದಾರೆ. ನಿರ್ದೇಶಕ ಸಂಜಯ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಶ್ರೀಹರ್ಷ ಸಂಗಿತ. ಸಾಮಾಜಿಕ ಅರಿವು ಮೂಡಿಸುವಂಥ ಒಂದು ಹಾಡನ್ನು ವಿಜಯ ಪ್ರಕಾಶ್‌ ಹಾಡಿದ್ದು, ಇನ್ನುಳಿದಂತೆ ಎರಡು ಐಟಂ ಹಾಡು ಚಿತ್ರದಲ್ಲಿದೆ. ದೇಶದ ಅಭಿವೃದ್ಧಿಗೆ ಬದಲಾವಣೆ ಮುಖ್ಯ ಎನ್ನುವ ಕಾರಣದಿಂದ ಈ ಚಿತ್ರವನ್ನು ಅವರು ಮಾಡಿದ್ದಾರೆ. ‘ಆ ಒಂದು ದಿನ’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್ ಈಗಾಗಲೇ ರಿಲೀಸ್ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com