ಭರ್ಜರಿ ಪ್ರಶಂಸೆ ಪಡೆದ ತ್ರಿವಿಕ್ರಮನ ಮಮ್ಮಿ ಹಾಡು…

Published on

415 Views

ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ‌ ಚಿತ್ರ ತ್ರಿವಿಕ್ರಮ
ಪ್ರಸ್ತುತ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದೆ.
ದೀಪಾವಳಿ ಹಬ್ಬಕ್ಕೆ ತ್ರಿವಿಕ್ರಮ ಚಿತ್ರದ ಮಮ್ಮಿ ಪ್ಲೀಸ್ ಮಮ್ಮಿ ಹಾಡು A2 music ಮೂಲಕ ಬಿಡುಗಡೆಯಾಗಿತ್ತು.
ಬಿಡುಗಡೆಯಾದ ಮೂರು ದಿನಗಳಲ್ಲಿ 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಈ ಹಾಡು ವೀಕ್ಚಣೆಯಾಗಿದೆ.
ಸಾಮಾನ್ಯವಾಗಿ ಅಮ್ಮ – ಮಗನ‌ ಸೆಂಟಿಮೆಂಟ್ ಹಾಡುಗಳಿರುತ್ತದೆ. ಮಗ‌ ತನ್ನ ಪ್ರೀತಿಯ ಬಗ್ಗೆ ತಾಯಿಯ ಬಳಿ ವಿನೂತನ ಶೈಲಿಯಲ್ಲಿ ಹೇಳಿಕೊಳ್ಳುವ ಈ ಹಾಡಿಗೆ ಅಪಾರ ಮೆಚ್ಚುಗೆ ದೊರಕಿದೆ.

ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಇಂಪಾಗಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.

ಗೌರಿ ಎಂಟರ್ ಟೈನರ್‌ ಲಾಂಛನದಲ್ಲಿ ಸೋಮಣ್ಣ ರಾಮ್ಕೋ ಅವರು‌ ನಿರ್ಮಿಸುತ್ತಿರುವ ಈ ಚಿತ್ರವನ್ನು ಸಹನಾ‌ ಮೂರ್ತಿ‌‌ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಸಹನಾ ಮೂರ್ತಿ ಅವರದೆ.

ಸಂತೋಷ್ ರೈ ಪಾತಾಜೆ, ಗುರು ಪ್ರಶಾಂತ್ ರೈ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ತ್ರಿವಿಕ್ರಮ ಚಿತ್ರಕ್ಕಿದೆ.
ವಿಕ್ರಮ್ ರವಿಚಂದ್ರನ್ ಅವರಿಗೆ ನಾಯಕಿಯಾಗಿ ಅಕಾಂಕ್ಷ ಶರ್ಮ ನಟಿಸುತ್ತಿದ್ದಾರೆ. ತುಳಸಿ ಶಿವಮಣಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ಚಿಕ್ಕಣ್ಣ, ರೋಹಿತ್ ರಾಯ್, ಆದಿಲೋಕೇಶ್, ಶಿವಮಣಿ, ಅಕ್ಷರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಹಾಡು ಹಾಗೂ ಟ್ರೇಲರ್ ಮೂಲಕ ‌ಸಾಕಷ್ಟು ಟ್ರೆಂಡ್ ಹುಟ್ಟಹಾಕಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com