ತೆರೆಗೆ ಬರಲು ಸಜ್ಜಾಗಿದೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾರ ಮಾರ್ಟಿನ್‌ ಚಿತ್ರ – ಡೇಟ್ ಇಲ್ಲಿದೆ ನೋಡಿ.

Published on

1110 Views
Advertisement

ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾರ ಮಾರ್ಟಿನ್‌ ಚಿತ್ರ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಎ.ಪಿ.ಅರ್ಜುನ್‌ ರವರು ನಿರ್ದೇಶಿಸಿದ್ದಾರೆ ಹಾಗೂ ಉದಯ್ ಕೆ. ಮೆಹ್ತಾ ರವರು ನಿರ್ಮಾಣ ಮಾಡಿದ್ದಾರೆ.

Advertisement

ಧ್ರುವ ಸರ್ಜಾರವರ ಮಾರ್ಟಿನ್‌ ಚಿತ್ರಕ್ಕೆ ಕೊನೆಗೂ ಬಿಡುಗಡೆಯ ದಿನಾಂಕ ನಿಗದಿಯಾಗಿದೆ. ಹೌದು, ಮಾರ್ಟಿನ್ ಚಿತ್ರವು 11 ಅಕ್ಟೋಬರ್ 2024 ಕ್ಕೆ ತೆರೆಯ ಮೇಲೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ. ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ನಿರ್ಮಾಪಕರಾದ ಉದಯ್ ಕೆ. ಮೆಹ್ತಾ ಮತ್ತು ನಿರ್ದೇಶಕರಾದ ಎ.ಪಿ.ಅರ್ಜುನ್‌ ರವರು ಭರವಸೆ ನೀಡಿದ್ದಾರೆ.

Advertisement


ಮಾರ್ಟಿನ್ ಚಿತ್ರವು ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಕನ್ನಡ, ತೆಲುಗು, ತೆಮಿಳು, ಮಲಯಾಳಂ ಹಾಗೂ ಹಿಂದಿ, ಈ 5 ಭಾಷೆಗಳಲ್ಲಿ ತೆರೆಗೆ ಬರಲಿದೆ. ಮಾರ್ಟಿನ್‌ ಚಿತ್ರದ ಟೀಸರ್ ಫೆಬ್ರವರಿ 23 ರಂದು ರಿಲೀಸ್ ಮಾಡಲಾಗಿತ್ತು. ಈ ಟೀಸರ್‌ ಕೇವಲ 3 ದಿನಗಳಲ್ಲೇ 70 ಮಿಲಿಯನ್ಸ್ ವೀಕ್ಷಣೆಯನ್ನು ಪಡೆದು ದಾಖಲೆಯನ್ನು ಸೃಷ್ಟಿಸಿದೆ. ಚಿತ್ರಕ್ಕೆ ಸಂಗೀತವನ್ನು ಮಣಿ ಶರ್ಮಾ ರವರು ಸಂಯೋಜಿಸಿದ್ದಾರೆ ಹಾಗೂ ಹಿನ್ನೆಲೆ ಸಂಗೀತವನ್ನು ರವಿ ಬಸ್ರೂರ್‌ ರವರು ಸಂಯೋಜಿಸಿದ್ದಾರೆ.

Advertisement

ಚಿತ್ರದಲ್ಲಿ ನಾಯಕನಾಗಿ ಧ್ರುವ ಸರ್ಜಾ, ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಅನ್ವೇಶಿ ಜೈನ್‌, ಸುಕೃತಾ ವಾಗ್ಲೆ, ಚಿಕ್ಕಣ್ಣ, ಸಾಧು ಕೋಕಿಲ, ಮಾಳವಿಕಾ ಅವಿನಾಶ್‌, ಅಚ್ಯುತ್‌ ಕುಮಾರ್‌ ರವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಾರ್ಟಿನ್‌ ಚಿತ್ರ 11 ಅಕ್ಟೋಬರ್ 2024ಕ್ಕೆ ತೆರೆಯ ಮೇಲೆ ಬರಲಿದ್ದು, ಧ್ರುವ ಸರ್ಜಾ ಅಭಿಮಾನಿಗಳು ಸಿನಿಮಾದ ಬಗ್ಗೆ ಬಹಳ ನಿರೀಕ್ಷೆಯನ್ನು ಇಟ್ಟುಕೊಂಡು ಕಾತರದಿಂದ ಕಾಯುತ್ತಿದ್ದಾರೆ.

Advertisement

ಚಿತ್ರ ತೆರೆಯ ಮೇಲೆ ಅಭೂತಪೂರ್ವ ಯಶಸ್ಸನ್ನು ಕಾಣಲಿ‌ ಎನ್ನುವುದೇ ಹಾರೈಕೆ.

ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ http://flixoye.com ನ್ನು ಫಾಲೋ ಮಾಡಿ.

More Buzz

Buzz 7 days ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 1 week ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 1 week ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com