“ಅಲ್ಲೇ ಡ್ರಾ ಅಲ್ಲೇ ಬಹುಮಾನ” ಇದು “ರತ್ನ ತೀರ್ಥ” ನಿರ್ದೇಶನ ಮಾಡುತ್ತಿರುವ ಚಿತ್ರದ ಶೀರ್ಷಿಕೆ

Published on

509 Views
Advertisement

ರಂಗಭೂಮಿಯಲ್ಲಿ ಪಳಗಿ ಧಾರಾವಾಹಿಗಳಲ್ಲಿ ಸಹಾಯಕ ನಿರ್ದೇಶಕನಾಗಿ
ನಂತರ ಕಿರುಚಿತ್ರಗಳನ್ನು ನಿರ್ದೇಶನ ಮಾಡುವ ಮೂಲಕ ಗಮನ ಸೆಳೆದಿದ್ದ
ರತ್ನ ತೀರ್ಥ ಅವರು ಮೊದಲ ಬಾರಿಗೆ ಚಿತ್ರವೊಂದನ್ನು ನಿರ್ದೇಶನ
ಮಾಡುತ್ತಿದ್ದಾರೆ. ಇವರು ನಿರ್ದೇಶನ ಮಾಡಲಿರುವ ಚಿತ್ರದ ಶೀರ್ಷಿಕೆ ಇಂದು ಬಿಡುಗಡೆಯಾಗಿದೆ.ಇಂದು ರತ್ನ‌ತೀರ್ಥ ಅವರ ಹುಟ್ಟು ಹಬ್ಬ ಹಾಗೂ ಹೊಸವರ್ಷದ ವಿಶೇಷ ದಿನವಾದ ಇಂದು ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಚಂದನವನದ ಸ್ಟಾರ್ ನಿರ್ದೇಶಕ ಸಿಂಪಲ್ ಸುನಿ ಅವರು ಈ ಚಿತ್ರದ ಶೀರ್ಷಿಕೆನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾಗೂ ರತ್ನ ತೀರ್ಥ ಅವರಿಗೆ ಶುಭಹಾರೈಸಿದ್ದಾರೆ. ಇನ್ನು ಟಗರು ಚಿತ್ರದಲ್ಲಿ “ಕಾನ್ಸ್‌ಟೇಬಲ್ ಸರೋಜ” ಪಾತ್ರದಲ್ಲಿ ನಟಿಸಿ ಕನ್ನಡಿಗರ ಮನಗೆದ್ದಿದ್ದ ನಟಿ ತ್ರಿವೇಣಿ ಕೃಷ್ಣ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ “ಶೌರ್ಯ” ಎಂಬ ಯುವನಟ ಹಾಗೂ ರಂಗಭೂಮಿ ಹಿನ್ನೆಲೆಯ ಹಲವು ಕಲಾವಿದರು ಚಿತ್ರದಲ್ಲಿ ನಟಿಸಲಿದ್ದಾರೆ. ಇದೇ ತಿಂಗಳಲ್ಲಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಲಿದೆ. ರತ್ನ ತೀರ್ಥ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸುತ್ತಾ ಅವರ ಹೊಸ ಚಿತ್ರಕ್ಕೆ ಶುಭಹಾರೈಸೋಣ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com