ರಾಷ್ಟ್ರಕೂಟ ನಿರ್ಮಾಣದ ನಾಟ್ ಔಟ್ ಚಿತ್ರದ ಹುಲಿ – ಕುರಿ ಆಟಕ್ಕೆ ಅಂಬರೀಶನ ಆಕ್ಷನ್ ಕಟ್

Published on

602 Views
Advertisement

*ಗಣ್ಯರ ಸಮ್ಮಖದಲ್ಲಿ ಬಿಡುಗಡೆಯಾಯಿತು ಚಿತ್ರದ ಮೋಷನ್ ಪೋಸ್ಟರ್* .
ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಹಾಗೂ ಶಮ್ಶುದ್ದೀನ್ ಎ ನಿರ್ಮಿಸಿರುವ “ನಾಟ್ ಔಟ್” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಯಿತು. ಎಂ.ಎಲ್.ಸಿ ಪುಟ್ಟಣ್ಣ, ನಿರ್ದೇಶಕ ಎ.ಪಿ.ಅರ್ಜುನ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
ನಮ್ಮ ರಾಷ್ಟ್ರಕೂಟ ಪಿಕ್ಚರ್ಸ್ ಸಂಸ್ಥೆಯ ಮೊದಲ ಚಿತ್ರವಾಗಿ “ಕಿಸ್” ಚಿತ್ರವನ್ನು ನಿರ್ಮಿಸಿದ್ದೆವು. ಈಗ “ನಾಟ್ ಔಟ್” ನಿರ್ಮಾಣವಾಗಿದೆ. ಇನ್ನೂ ಎರಡು ಚಿತ್ರಗಳು ಸಿದ್ದವಾಗಿದೆ. ಆ ಕುರಿತು ಸದ್ಯದಲ್ಲೇ ಮಾಹಿತಿ ನೀಡುತ್ತೇವೆ. ವರ್ಷಕ್ಕೆ ನಾಲ್ಕು ಚಿತ್ರಗಳನ್ನು ನಿರ್ಮಾಣ ಮಾಡುವ ಯೋಜನೆ ನಮ್ಮ ಸಂಸ್ಥೆಗಿದೆ ಎಂದರು ನಿರ್ಮಾಪಕ ಶಮ್ಶುದ್ದೀನ್.

Advertisement

ಸುಖಾಂತ್ಯ ಕಂಡ ಹೆಡ್‌ಬುಷ್ ರಾದ್ದಾಂತ
ನಾನು “ಕಿಸ್” ಚಿತ್ರ ನಿರ್ಮಾಣವಾಗುತ್ತಿರುವ ಸಮಯದಲ್ಲಿ ಅದರ ಪ್ರಚಾರ ನೋಡಿ, ಸಿನಿಮಾವನ್ನು ಇಷ್ಟು ಪ್ರೀತಿಸುವ ನಿರ್ಮಾಪಕರ ಬಳಿ ನಾನು ಕೆಲಸ ಮಾಡಬೇಕು ಅನಿಸಿತ್ತು. ಈಗ ಈಡೇರಿದೆ. “ನಾಟ್ ಔಟ್” ಎಂದರೆ
ಕಣ್ಣಿಗೆ ಕಾಣದೆ ಇರುವ ವ್ಯಕ್ತಿ ಕೊಡು ತೀರ್ಪೆ “ನಾಟ್ ಔಟ್” ಪ್ರತಿ ಆಟದಲ್ಲಿ ಒಬ್ಬ ಅಂಪೈರ್ ಇರ್ತಾನೆ.
ಜೀವನದ ಆಟಕ್ಕೂ ಒಬ್ಬ ಅಂಪೈರ್ ಇರ್ತಾನೆ.. ಈ ಚಿತ್ರದಲ್ಲಿ ಹುಲಿ – ಕುರಿ ಎಂಬ ಹಳ್ಳಿ ಸೊಗಡಿನ ಆಟವನ್ನ ಹೇಗೆ ಹಾಡ್ತರೋ, ಅದೇ ರೀತಿ ಚಿತ್ರದ ಕಥೆ ಸಾಗುತ್ತೆ. ಆಟದಲ್ಲಿ ಬೆಟ್ಟದ ತುದಿಯಲ್ಲಿರುವ ಹುಲಿಗಳು ಮತ್ತು ಬೆಟ್ಟದ ತಳದಲ್ಲಿರುವ ಕುರಿಗಳು ಬೆಟ್ಟವನ್ನು ಹತ್ತುವಾಗ ಹುಲಿಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಮಾಡುವ ಪ್ರಯತ್ನಗಳು ಆಟದಲ್ಲಿ ಇದ್ದಂತೆ ಚಿತ್ರಕಥೆ ಮತ್ತು ಸಂಭಾಷಣೆಯಲ್ಲಿ ಅದನ್ನ ನೋಡಬಹುದು. ಸಿನಿಮಾದಲ್ಲಿ ಎಲ್ಲಾ ಪಾತ್ರಗಳು ಕಥೆಗೆ ಪೂರಕವಾಗಿರುತ್ತದೆ ಎಲ್ಲಾ ಪಾತ್ರಗಳು ಬಹು ಮುಖ್ಯವಾಗಿದೆ ಎಂದರು..

Advertisement

ಆ ರೀತಿಯ ಕಥಾಹಂದರ ಹೊಂದಿರುವ “ನಾಟ್ ಔಟ್” ನ ನಾಯಕನಾಗಿ ನಿರ್ಮಾಪಕ ರವಿಕುಮಾರ್ ಅವರ ಪುತ್ರ ಅಜಯ್ ಪೃಥ್ವಿ ಅಭಿನಯಿಸಿದ್ದಾರೆ. ರಚನಾ ಇಂದರ್ ನಾಯಕಿ. ರವಿಶಂಕರ್, ಕಾಕ್ರೋಜ್ ಸುಧಿ, ಗೋಪಾಲಕೃಷ್ಣ ದೇಶಪಾಂಡೆ, ಸಲ್ಮಾನ್, ಗೋವಿಂದೇಗೌಡ, ಪ್ರಶಾಂತ್ ಸಿದ್ದಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಬೆಂಗಳೂರು – ಮೈಸೂರಿನಲ್ಲಿ ಚಿತ್ರೀಕರಣ ನಡೆದಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಹಾಲೇಶ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ. “ನಾಟ್ ಔಟ್” ತೆರೆಗೆ ಬರಲು ಸಿದ್ದವಾಗಿದೆ. ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಅಂಬರೀಶ್ ತಿಳಿಸಿದರು.
ನಾನು ಏಕಾಏಕಿ ಚಿತ್ರರಂಗಕ್ಕೆ ಬಂದಿಲ್ಲ. ಐದನೇ ತರಗತಿಯಿಂದಲೇ “ಬಿಂಬ” ಮೂಲಕ ಸಾಕಷ್ಟು ಕಲಿತೆ. ನಂತರ ಪ್ರಸಿದ್ಧ ತರಭೇತಿ ಶಾಲೆಯಲ್ಲಿ ನಟನೆ ಕೂಡ ಕಲಿತೆ. “ಮೆಹಬೂಬ” ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಇನ್ನೂ ಮೂರು, ನಾಲ್ಕು ಚಿತ್ರಗಳಲ್ಲೂ ಅಭಿನಯಿಸಿದ್ದೇನೆ. ಈಗ “ನಾಕ್ ಔಟ್” ಚಿತ್ರದಲ್ಲಿ ನಟಿಸಿದ್ದೇನೆ. ಚಿತ್ರ ಹಾಗೂ ನನ್ನ ಪಾತ್ರ ಚೆನ್ನಾಗಿದೆ. ಪ್ರೋತ್ಸಾಹ ನೀಡಿ ಎಂದರು ನಾಯಕ ಅಜಯ್ ಪೃಥ್ವಿ.
ತಾವು ನರ್ಸ್ ಪಾತ್ರದಲ್ಲಿ ನಟಿಸಿರುವುದಾಗಿ ರಚನಾ ಇಂದರ್ ಹೇಳಿದರು. ಕಾಕ್ರೋಜ್ ಸುಧಿ ತಮ್ಮ ಪಾತ್ರದ ವಿವರಣೆ ನೀಡಿದರು. ಕಾರ್ಯಕಾರಿ ನಿರ್ಮಾಪಕ ಕುಮಾರ್ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement

More Buzz

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 1 week ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 1 week ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com