ಲಾಕ್ ಡೌನ್ ಸಮಯದಲ್ಲಿ ಸಿದ್ದವಾಯಿತು “ಅನಿರೀಕ್ಷಿತ”.

Published on

495 Views
Advertisement

ಮಿಮಿಕ್ರಿ ಮೂಲಕ ಜಮಮನಸೂರೆಗೊಂಡಿರುವ ಮಿಮಿಕ್ರಿ ದಯಾನಂದ್ ಪ್ರಥಮ‌ ನಿರ್ದೇಶನ.

ಜೀವನದ ಅನಿರೀಕ್ಷಿತ ತಿರುವುಗಳು ಬದುಕಿನ ಗತಿಯನ್ನೇ ಬದಲಿಸಿ,ಯಾರೂ ಕಲಿಸದ ಪಾಠವನ್ನು ಕಲಿಸಿಬಿಡುತ್ತವೆ. ಇಂತಹ ತಾತ್ವೀಕವಾದ ಎಳೆಯೊಂದು, ಕುತೂಹಲ ಹಿಡಿದಿಟ್ಟುಕೊಂಡು ಹೇಗೆ ಎಳೆಎಳೆಯಾಗಿ ರಹಸ್ಯ ಬಿಚ್ಚಿಕೊಳ್ಳುತ್ತ ಸಾಗುತ್ತದೆ ಎಂಬುದನ್ನು ನಿರೂಪಿಸುವುದೇ, “ಅನಿರೀಕ್ಷಿತ” ಚಿತ್ರದ ಕಥಾಹಂದರ.
ಲಾಕ್ ಡೌನ್ ಸಮಯ ವ್ಯರ್ಥ ಮಾಡಬಾರದೆಂದು ತಿಳಿದ ಹದಿಮೂರು ಜನ ಪ್ರತಿಭಾವಂತರ ತಂಡದ ಪರಿಶ್ರಮದ ‌ಫಲವಾಗಿ ಈ ಚಿತ್ರ ಮೂಡಿಬಂದಿದೆ.

Advertisement

ಕೇವಲ ಎರಡು ಪಾತ್ರಗಳನ್ನಿಟ್ಟುಕೊಂಡು ಒಂದೇ ಚಿತ್ರೀಕರಣ ಸ್ಥಳದಲ್ಲಿ ನಾಲ್ಕು ಲೊಕೇಶನ್ ಗಳಂತೆ ಬಳಸಿರುವುದು ಈ ಚಿತ್ರದ ವಿಶೇಷ.
ಚಿತ್ರೀಕರಣ, ನಂತರದ ಚಟುವಟಿಕೆಗಳು ಪೂರ್ಣವಾಗಿ ‌ಬಿಡುಗಡೆಗೆ ಸಿದ್ದವಾಗಿದೆ.

ಲಾಕ್ ಡೌನ್ ಪೂರ್ಣವಾಗಿ ಚಿತ್ರಮಂದಿರ ತೆರವಿಗೆ ಅನುಮತಿ ದೊರಕಿದ ಕೂಡಲೆ ಚಿತ್ರಮಂದಿರ ಹಾಗೂ ಓಟಿಟಿ ಫ್ಲಾಟ್ ಫಾರಂನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ನಿರ್ಧರಿಸಿದೆ.

Advertisement

Advertisement

ಅನೀರಿಕ್ಷಿತ ಚಿತ್ರದ ಮೊದಲ ಪೋಸ್ಟರನ್ನು ನಾಗತಿಹಳ್ಳಿ ಚಂದ್ರಶೇಖರ್ ಅವರು ಬಿಡುಗಡೆ ಮಾಡಿದ್ದಾರೆ. ಎರಡು ಹಾಗೂ ಮೂರನೇ ಪೋಸ್ಟರನ್ನು ಗಿರಿಜಾ ಲೋಕೇಶ್ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್ ಅನಾವರಣಗೊಳಿಸಿದ್ದಾರೆ. ಸದ್ಯದಲ್ಲೇ ಟ್ರೇಲರ್ ಸಹ ಬಿಡುಗಡೆಯಾಗಲಿದೆ.
ಎಸ್.ಕೆ.ಟಾಕೀಸ್ ಲಾಂಛನದಲ್ಲಿ ‌ಶಾಂತಕುಮಾರ್‌ ನಿರ್ಮಿಸಿರುವ ಈ‌ ಚಿತ್ರದ ಸಹ ನಿರ್ಮಾಪಕರು ಸಂತೋಷ್ ಕೊಡಂಕೇರಿ, ರಘು ಎಸ್ ಹಾಗೂ ಮಿಮಿಕ್ರಿ ದಯಾನಂದ್.‌

ಮಿಮಿಕ್ರಿ ದಯಾನಂದ್ ಅವರೆ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆಯನ್ನು ನೆಳ್ಳುಳ್ಳಿ ರಾಜಶೇಖರನ್ ಬರೆದಿದ್ದಾರೆ.
ಗುರುಕಿರಣ್ ಸಂಗೀತ ನೀಡಿದ್ದಾರೆ
ಜೀವನ್ ಗೌಡ ಛಾಯಾಗ್ರಹಣ ಹಾಗೂ ರಘು ಅವರ ಸಂಕಲನ ಈ ಚಿತ್ರಕ್ಕಿದೆ.‌

Advertisement

ಚಿತ್ರದಲ್ಲಿ ಕೇವಲ ಎರಡುಪಾತ್ರಗಳಿದ್ದು,‌ ಮಿಮಿಕ್ರಿ ದಯಾನಂದ್ ಹಾಗೂ ಭಾಮ ಅಭಿನಯಿಸಿದ್ದಾರೆ.
ಸಹ ನಿರ್ಮಾಪಕ ಸಂತೋಷ್ ಕೊಡೆಂಕೇರಿ ಈ ಚಿತ್ರದ ತಾಂತ್ರಿಕ ವಿನ್ಯಾಸದ ಜವಾಬ್ದಾರಿ ಹೊತ್ತಿದ್ದಾರೆ.

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com