ಅಸತೋಮ ಸದ್ಗಮಯ

Published on

520 Views
Advertisement

ಸೆಟ್ಟೇರಿದಾಗಿನಿಂದ ಸುದ್ದಿ ಮಾಡ್ತಾ ಇರೋ ಅಸತೋಮ ಸದ್ಗಮಯ ಚಿತ್ರ ಅದಷ್ಟು ಶೀಘ್ರದಲ್ಲಿ ಬೆಳ್ಳಿತರೆಗೆ ಬರಲು ತಯಾರಾಗಿದೆ. ಇದರ ಟ್ರೈಲರ್ ಇದೇ ಬರುವ ಮಾರ್ಚ್ 23ರಂದು ದುಬೈನ ಹೋಟೇಲ್ ಫಾರ್ಚೂನ್ ಪ್ಲಾಝಾದಲ್ಲಿ ನಡೆಯಲಿದೆ. ದುಬೈನಲ್ಲಿ ನಡೆಯಲಿರುವ ಸಮಾರಂಭದಲ್ಲಿ ದುಬೈನ ಗಣ್ಯಾತಿಗಣ್ಯ ಅನಿವಾಸಿ ಕನ್ನಡಿಗರ ಸಮ್ಮುಖದಲ್ಲಿ ಇದರ ಟ್ರೈಲರ್ ಬಿಡುಗಡೆಗೊಳ್ಳಲಿದೆ. ಕನ್ನಡ ಚಿತ್ರವೊಂದರ ಟ್ರೈಲರ್ ದುಬೈನಲ್ಲಿ ಬಿಡುಗಡೆಗೊಳ್ಳಲಿರುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ, ಅದರಲ್ಲೂ ಅದು ನಾನು ನಿರ್ದೇಶಿಸಿರುವ ಚಿತ್ರವಾಗಿರುವುದರಿಂದ ನನಗೆ ತುಂಬಾ ಸಂತೋಷವಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ರಾಜೇಶ್ ವೇಣೂರ್‍ರವರು.

ತನ್ನ ವಿಶಿಷ್ಟ ಪೋಸ್ಟರ್‍ಗಳಿಂದಂಲೇ ಕುತೂಹಲ ಹುಟ್ಟಿಸಿದ್ದ ಅಸತೋಮ ಸದ್ಗಮಯ ಚಿತ್ರದ ಟ್ರೈಲರ್ ಬಿಡುಗಡೆ ಬಗ್ಗೆ ತುಂಬಾ ಮಂದಿ ಫೋನ್ ಮಾಡಿ ವಿಚಾರಿಸುತ್ತಿದ್ದರು, ಪೋಸ್ಟರ್‍ಗಳ ತರಾನೇ ಟ್ರೈಲರ್ ಕೂಡ ಪ್ರೇಕ್ಷಕರಿಗೆ ಇಷ್ಟವಾಗುತ್ತೆ ಮತ್ತು ಖಂಡಿತಾವಾಗಿಯೂ ಇದು ಚಿತ್ರದ ಬಗ್ಗೆ ಇನ್ನಷ್ಟು ನಿರೀಕ್ಷೆ ಹುಟ್ಟಿಸುತ್ತೆ ಎನ್ನುತ್ತಾರೆ ನಿರ್ದೇಶಕರು. ಇದು ಇಂದಿನ ತಲೆಮಾರಿನ ಸಾಮಾಜಿಕ ಸ್ಥಿತಿಗತಿಯ ಬಗ್ಗೆ ಇರೋ ಚಿತ್ರವಾಗಿದ್ದರೂ ಸಂಪೂರ್ಣವಾಗಿ ಸಾಂಸಾರಿಕ ಚಿತ್ರ ಎನ್ನುತ್ತಾರೆ ಅವರು. ಇದರ ಹಾಡುಗಳು ಈಗಾಗಲೇ ಬಿಡುಗಡೆಯಾಗಬೇಕಿತ್ತು ಆದರೆ ಕಾರಣಾಂತರಗಳಿಂದ ಸ್ವಲ್ಪ ತಡವಾಗಿದೆ.

Advertisement

ಚಿತ್ರದ ಆಡಿಯೋ ಸಿಡಿ ಎಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಬಿಡುಗಡೆಗೊಳ್ಳಲಿದೆ ಎನ್ನುತ್ತದೆ ಚಿತ್ರತಂಡ. ಈ ಚಿತ್ರದಲ್ಲಿ ರಾಧಿಕಾ ಚೇತನ್‍ರವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ, ಜೊತೆಗೆ ಕಿರಣ್ ರಾಜ್, ಲಾಸ್ಯಾ ನಾಗರಾಜ್ ಹಾಗೂ ಬೇಬಿ ಚಿತ್ರಾಲಿ ಪ್ರಮುಖ ತಾರಾಗಣದಲ್ಲಿದ್ದಾರೆ. ಅಸತೋಮ ಸದ್ಗಮಯ ಚಿತ್ರವನ್ನ ಐಕೇರ್ ಮೂವೀಸ್ ಬ್ಯಾನರಿನಡಿಯಲ್ಲಿ, ಅಶ್ವಿನ್ ಪಿರೇರಾರವರು ನಿರ್ಮಿಸುತ್ತಿದ್ದಾರೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com