ಅಭಿಮಾನಿಗಳಿಗೆ ಹೊಸ ಸುದ್ದಿ ನೀಡಿದ ಕಿಚ್ಚ ಸುದೀಪ ನಟನೆಯ ಮ್ಯಾಕ್ಸ್ – ಇದೇ ದಿನದಂದು ಸಿಗಲಿದೆ ದೊಡ್ಡ ಅಪ್’ಡೇಟ್

Published on

631 Views

ಸ್ಯಾಂಡಲ್‌ವುಡ್ ನಟ, ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ‘ಮ್ಯಾಕ್ಸ್’ (Max) ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ಭರದಿಂದ ಸಾಗುತ್ತಿದೆ. ಸುದೀಪ್ ಅಭಿಮಾನಿಗಳಂತು ಕಾತುರದಿಂದ ಸಿನಿಮಾದ ಬಿಡುಗಡೆಗಾಗಿ ಕಾದು ಕುಳಿತ್ತಿದ್ದು, ಇದೀಗ ಚಿತ್ರತಂಡ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಏನಪ್ಪ ಆ ಸುದ್ದಿ ಅಂತೀರಾ? ಬನ್ನಿ ಈ ಸ್ಟೋರಿನ ಕಂಪ್ಲೀಟ್ ಆಗಿ ಓದಿ.

‘ಮ್ಯಾಕ್ಸ್’ ಸಿನಿಮಾದ ಬಗ್ಗೆ ಏನು ಅಪ್‌ಡೇಟ್ ಸಿಗದೇ ಕಾಯುತ್ತಿದ್ದ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಮ್ಯಾಕ್ಸ್ ಚಿತ್ರತಂಡ ಸಿಹಿಸುದ್ದಿ ನೀಡಿದ್ದು, ಇದೇ ಜುಲೈ 16ರಂದು ಮಧ್ಯಾಹ್ನ 12:34ಕ್ಕೆ ಚಿತ್ರದ ಕುರಿತು ದೊಡ್ಡ ಅಪ್‌ಡೇಟ್ ಸಿಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಸುದೀಪ್ ನಟನೆಯ ‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಆ್ಯಕ್ಷನ್ ಕಟ್ ಹೇಳುತ್ತಿದ್ದು, ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಬಹುಭಾಷೆಗಳಲ್ಲಿ ಮ್ಯಾಕ್ಸ್ ಸಿನಿಮಾ ರಿಲೀಸ್ ಆಗಲಿದೆ. ಅಂದಹಾಗೆ, 2022ರಲ್ಲಿ ತೆರೆಕಂಡ `ವಿಕ್ರಾಂತ್ ರೋಣ ಚಿತ್ರದ ನಂತರ ಸುದೀಪ್ ಗ್ಯಾಪ್ ತೆಗೆದುಕೊಂಡಿದ್ದರು. ಬಿಗ್ ಬಾಸ್ ಶೋ ಸೇರಿದಂತೆ ಇತರೆ ಕೆಲಸಗಳಲ್ಲಿ ಬ್ಯುಸಿಯಾದರು.

ಇದೀಗ ಮ್ಯಾಕ್ಸ್ ಚಲನಚಿತ್ರ ಬಿಡುಗಡೆ ಸುದ್ದಿ ಬರುತ್ತಿದ್ದಂತೆ ಫ್ಯಾನ್ಸ್ ಕೂಡ ಹುಚ್ಚೆದ್ದು ಕುಣಿಯುತ್ತಿದ್ದಾರೆ.

 

ಚಲನಚಿತ್ರಗಳ ಕುರಿತ ಹೆಚ್ಚಿನ ಮಾಹಿತಿಗಾಗಿ https://flixoye.com ನ್ನು ಫಾಲೋ ಮಾಡಿ

Copyright ©2026 . All Rights Reserved. privacy | terms Whatsapp: 9538193653 Email: hello@flixoye.com