ಈ ಬಾರಿ ಬಿಗ್ ಬಾಸ್ 7ರ ವಿನ್ನರ್ ಕರಾವಳಿ ಹುಡುಗ ಶೈನ್ ಶೆಟ್ಟಿ…

Published on

449 Views
Advertisement

ಕನ್ನಡ ಮನೋರಂಜನಾ ಲೋಕದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮ ಬಿಗ್ ಬಾಸ್ ಸೀಸನ್ 7ರ ವಿನ್ನರ್ ಆಗಿ ಉಡುಪಿ ಮೂಲದ ನಟ ಶೈನ್ ಶೆಟ್ಟಿ ಮಿಂಚಿದ್ದಾರೆ. ಮಜಾ ಟಾಕೀಸ್ ಖ್ಯಾತಿಯ ನಟ ಕುರಿ ಪ್ರತಾಪ್ ರನ್ನರ್‌ ಅಪ್ ಆಗಿದ್ದಾರೆ. ಪ್ರತಿಭಾವಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ವಾಸುಕಿ ವೈಭವ್ ಅವರು ತೃತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ಬಿಗ್ ಬಾಸ್ ಸೀಸನ್ 7 ರ ಫಿನಾಲೆ ಮೆಗಾ ಶೋನಲ್ಲಿ ಈ ಕಾರ್ಯಕ್ರಮದ ನಿರೂಪಕ ಚಿತ್ರ ನಟ ಕಿಚ್ಚ ಸುದೀಪ್ ಅವರು ಶೈನ್ ಶೆಟ್ಟಿ ಅವರ ಹೆಸರನ್ನು ಘೋಷಿಸುತ್ತಿದ್ದಂತೆ ಬಿಗ್ ಬಾಸ್ ಸ್ಟೇಜ್ ಬಾಣ ಬಿರುಸುಗಳಿಂದ ತುಂಬಿಹೋಯಿತು. ಶೈನ್ ಹೆಸರು ಘೋಷಣೆ ಮಾಡಿ ಕಾರ್ಯಕ್ರಮದಲ್ಲಿ ವಿಜೇತ ಶೈನ್ ಶೆಟ್ರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಟ್ರೋಫಿ ಹಾಗೂ 50 ಲಕ್ಷ ರೂ. ನಗದು ಬಹುಮಾನವನ್ನು ವಿತರಿಸಿದರು.

Advertisement

ಬಾರಿಯ ಬಿಗ್ ಬಾಸ್ ನಲ್ಲಿ 18 ಜನ ಸ್ಪರ್ಧಿಗಳು ಮನೆಯೊಳಗೆ ಪ್ರವೇಶಿಸಿದ್ದರು. ಇವರಲ್ಲಿ ಜನಪ್ರಿಯ ಪತ್ರಕರ್ತ ರವಿ ಬೆಳಗೆರೆ, ಹಿರಿಯ ನಟ, ನಿರ್ಮಾಪಕ ಜೈ ಜಗದೀಶ್, ರಂಗಭೂಮಿ ಹಾಗೂ ಚಿತ್ರ ನಟ ರಾಜು ತಾಳಿಕೋಟೆ, ಸಂಗೀತ ನಿರ್ದೇಶಕ ವಾಸುಕಿ ವೈಭವ್, ನಿರೂಪಕಿ, ನಟಿ, ಸುಜಾತ ಅವರು ಪ್ರಮುಖರಾಗಿದ್ದರು. ಒಟ್ಟು 113 ದಿನಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ಪ್ರತೀ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದರು.

ಅಂತಿಮವಾಗಿ ಶೈನ್ ಶೆಟ್ಟಿ, ಕುರಿ ಪ್ರತಾಪ್, ವಾಸುಕಿ ವೈಭವ್, ದೀಪಿಕಾ ದಾಸ್ ಮತ್ತು ಭೂಮಿ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದರು. ಅವರಲ್ಲಿ ಭೂಮಿ ಶೆಟ್ಟಿ ಮತ್ತು ದೀಪಿಕಾ ದಾಸ್ ಅವರು ಶನಿವಾರ ಮನೆಯಿಂದ ಹೊರಬಿದ್ದಿದ್ದರು. ಆ ಮೂಲಕ ಶೈನ್ ಶೆಟ್ಟಿ, ಪ್ರತಾಪ್ ಮತ್ತು ವಾಸುಕಿ ಬೆಸ್ಟ್ ತ್ರೀ ಸ್ಪರ್ಧಿಗಳಾಗಿ ಮೂಡಿಬಂದಿದ್ದರು.

Advertisement

ಆದಿತ್ಯವಾರ ರಾತ್ರಿ ತನಕವೂ ಮೆಗಾ ಫೈನಲ್ ಗೂ ಮುಂಚೆ ವಾಸುಕಿ ವೈಭವ್ ತೃತೀಯ ಸ್ಥಾನಿಯಾಗಿ ಹೊರಬಿದ್ದರು. ಬಳಿಕ ಇದ್ದಿದ್ದು ಶೈನ್ ಮತ್ತು ಪ್ರತಾಪ್ ಅವರ ನಡುವೆ ವಿನ್ನರ್ ಯಾರೆಂಬ ಕುತೂಹಲ ಜನರಲ್ಲಿ ಮೂಡಿತ್ತು.

ಮೂಲತಃ ಕುಂದಾಪುರದವರಾದ ಶೈನ್ ಶೆಟ್ಟಿ ಶರಶ್ಚಂದ್ರ ಶೆಟ್ಟಿ ಹಾಗೂ ಇಂದಿರಾ ಎಸ್. ಶೆಟ್ಟಿ ದಂಪತಿಯ ಹಿರಿಯ ಪುತ್ರ. ಶೈನ್ ಹೆತ್ತವರು ಕಳೆದ 10 ವರ್ಷಗಳಿಂದ ಉಡುಪಿಯ ಆತ್ರಾಡಿಯಲ್ಲಿ ವಾಸವಾಗಿದ್ದಾರೆ. ಶೈನ್ ಅವರು ತಮ್ಮ ಶಿಕ್ಷಣವನ್ನು ಉಡುಪಿ ಸುತ್ತಮುತ್ತಲೇ ಪೂರೈಸಿದ್ದಾರೆ. ಬ್ರಹ್ಮಾವರದ ಲಿಟಲ್ ರಾಕ್, ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು, ಮಣಿಪಾಲದ ಎಂಪಿಎಂಸಿ, ಹೆಬ್ರಿಯ ನವೋದಯ ಶಿಕ್ಷಣ ಸಂಸ್ಥೆಗಳ ಹಳೆ ವಿದ್ಯಾರ್ಥಿಯಾಗಿರುವ ಶೈನ್ ಅವರು ಬಳಿಕ ನಟನಾ ಕ್ಷೇತ್ರದಲ್ಲಿ ಅವಕಾಶವನ್ನು ಅರಸಿಕೊಂಡು ಉದ್ಯಾನ ನಗರಿ ಬೆಂಗಳೂರಿಗೆ ಬಂದರು.

Advertisement

ಬಹುಮುಖ ಪ್ರತಿಭೆಯು ಶೈನ್ ಶೆಟ್ಟಿ ಅವರು ಸ್ಯಾಂಡಲ್‌ವುಡ್‌ನಲ್ಲಿ ಸಾಧನೆ ಮಾಡುವ ಗುರಿ-ಛಲದೊಂದಿಗೆ ಕಳೆದ 7 ವರ್ಷಗಳ ಹಿಂದೆ ಬೆಂಗಳೂರಿಗೆ ಪ್ರಯಾಣಿಸಿದರು. ಇವರಲ್ಲಿರುವ ನಟನಾ ಪ್ರತಿಭೆಗೆ ಆರಂಭದಲ್ಲೇ ಕಿರುತೆರೆಯಲ್ಲಿ ಅವಕಾಶಗಳು ಅರಸಿ ಬಂದವು. ‘ಮೀರಾ ಮಾಧವ’, ‘ಲಕ್ಷ್ಮೀ ಬಾರಮ್ಮ’, ‘ಮನೆದೇವ್ರು’, ‘ಕೋಗಿಲೆ’, ‘ಕನಕ’ ಮತ್ತಿತರ ಧಾರಾವಾಹಿಗಳಲ್ಲಿ ನಟಿಸಿ ಕರ್ನಾಟಕದ ಮನೆಮಾತಾದರು. ಉತ್ತಮ ಕಂಠಸಿರಿಯನ್ನೂ ಹೊಂದಿರುವ ಶೈನ್ ಅವರು ಸುವರ್ಣ ಸ್ಟಾರ್ ಸಿಂಗರ್‌ ಕಾರ್ಯಕ್ರಮದ ಫೈನಲ್ ಹಂತದವರೆಗೂ ತಲುಪಿದ್ದರು. ಶೈನ್ ಅವರು ‘ಕುಡ್ಲ ಕೆಫೆ’, ‘ರಂಗ್’ ಎಂಬ ಎರಡು ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತುಳು ಚಿತ್ರರಂಗದಲ್ಲೂ ತಮ್ಮ ಅಭಿನಯ ಚಾತುರ್ಯವನ್ನು ಪ್ರದರ್ಶಿಸಿದ್ದಾರೆ.

Advertisement

ಇನ್ನುಳಿದಂತೆ ‘ಒಂದು ಮೊಟ್ಟೆಯ ಕಥೆ’, ‘ಅಸ್ತಿತ್ವ’, ‘ಜೀವನ ಯಜ್ಞ’, ‘ಕ’ ಮೊದಲಾದ ಕನ್ನಡ ಚಿತ್ರಗಳಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಯನ್ನು ನಡೆಸಿದ್ದಾರೆ. ಗಾಯಕರೂ, ಕಾರ್ಯಕ್ರಮ ನಿರೂಪಕರೂ ಆಗಿರುವ ಶೈನ್ ಶೆಟ್ರು ತಮ್ಮ ಜೀವನದಲ್ಲಿ ಹಲವು ಏಳುಬೀಳುಗಳನ್ನು ಕಂಡವರು. ಕಠಿಣ ಪರಿಶ್ರಮದ ಮೂಲಕ ಚಿತ್ರರಂಗದಲ್ಲಿ ತನ್ನ ಛಾಪನ್ನು ಮೂಡಿಸುತ್ತಿರುವ ಕರಾವಳಿಯ ಈ ಪ್ರತಿಭೆಯ ಮುಡಿಗೆ ಇದೀಗ ಬಿಗ್ ಬಾಸ್ ಕಿರೀಟ ಲಭಿಸಿರುವುದು ಅವರ ಪ್ರತಿಭೆಗೆ ಸಿಕ್ಕ ಮನ್ನಣೆಯಾಗಿದೆ.

ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ, ಎರಡನೇ ಸ್ಥಾನ ಗಳಿಸಿದ ಕುರಿ ಪ್ರತಾಪ್ ಮತ್ತು ತೃತೀಯ ಸ್ಥಾನ ಗಳಿಸಿದ ವಾಸುಕಿ ವೈಭವ್ ಅವರಿಗೆ ಬಿಗ್ ಬಾಸ್ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com