90 ಬಿಡಿ ಮನೀಗ್ ನಡಿ ಎನ್ನುತ್ತಾರೆ ಬಿರಾದಾರ್

Published on

502 Views
Advertisement

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌ ಈ ಚಿತ್ರದ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು.

ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ಬಂಡವಾಳ ಹೂಡಿದ್ದಾರೆ
ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ ಕರ್ನಾಟಕ ಶೈಲಿಯಲ್ಲಿ ಕಥೆ ಹೇಳಲು ಹೊರಟ್ಟಿದ್ದೇವೆ. ಎಂಭತ್ತು ಭಾಗದಷ್ಟು ಸಂಭಾಷಣೆ ಉತ್ತರ ಕರ್ನಾಟಕ ಶೈಲಿಯಲ್ಲಿರುತ್ತದೆ. ಹಾಗಾಗಿ ನಮಗೆ ಉತ್ತರ ಕರ್ನಾಟಕದ ಕಲಾವಿದನೇ ಬೇಕಾಗಿತ್ತು. ಆಗ ಬಿರಾದಾರ್ ಅವರನ್ನು ಆಯ್ಕೆ ಮಾಡಿಕೊಂಡೆವು.‌ ಅವರ 500 ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ.
500ಚಿತ್ರಗಳಲ್ಲಿ ಅಭಿನಯಿಸಿದ್ದಿನೆಂದರೆ ಅದಕ್ಕೆ ರಂಗಭೂಮಿ ಹಾಗೂ ಚಿತ್ರರಂಗದವರ ಪ್ರೋತ್ಸಾಹವೇ ಕಾರಣ.

Advertisement

ಈ ಚಿತ್ರದಲ್ಲಿ ಊದಿನ ಕಡ್ಡಿ ಮಾರುವವನ ಪಾತ್ರ ನನ್ನದು. ನನಗೆ ಕುಡಿತದ ಚಟ ಇರುತ್ತದೆ. ಒಬ್ಬ ಹೆಂಗಸಿನ ಪರಿಚಯವಾಗುತ್ತದೆ. ಆನಂತರ ಸಾಕಷ್ಟು ತಿರುವುಗಳಿರುತ್ತದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ನಾಟಕದಲ್ಲಿ ಹಾಗೋಹೀಗೋ ಕುಣಿಯುತ್ತಿದ್ದೆ. ಈ ಚಿತ್ರದಲ್ಲಿ ಹಾಡೊಂದಕ್ಕೆ ಪೂರ್ಣಪ್ರಮಾಣದಲ್ಲಿ ನೃತ್ಯ ಮಾಡಿದ್ದೇನೆ. ಭೂಷಣ್ ಮಾಸ್ಟರ್ ಮಾಡಿಸಿದ್ದಾರೆ. ಈ ಹಾಡನ್ನು ನಟ ಶರಣ್ ಮೆಚ್ಚಿಕೊಂಡಿದ್ದಾರೆ ಎಂದು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ವೈಜನಾಥ್ ಬಿರಾದಾರ್ ವಿವರಿಸಿದರು.

Advertisement

ವೃತ್ತಿ ರಂಗಭೂಮಿಯಲ್ಲಿ ಚಿಕ್ಕ ವಯಸ್ಸಿನಿಂದ ನಾಟಕ ಮಾಡಿಕೊಂಡು ಬಂದಿದ್ದೀನಿ. ಮೊದಲ ಬಾರಿಗೆ ಬಿರಾದಾರ್‌ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದೀನಿ. ಈ ಚಿತ್ರದಲ್ಲಿ ವೇಶ್ಯೆ ಪಾತ್ರ ಮಾಡಿದ್ದೇನೆ. ನಾಯಕನನ್ನು ದುಶ್ಚಟಗಳಿಂದ ದೂರ ಮಾಡುತ್ತೇನೆ ಎಂದು ನಾಯಕಿ ನೀತಾ ಪಾತ್ರದ ಬಗ್ಗೆ
ಹೇಳಿದರು.


ಬಿರಾದಾರ್ ಅವರಲ್ಲಿ ವಿಶೇಷ ಶಕ್ತಿ ಇದೆ.ಈ ವಯಸ್ಸಿನಲ್ಲಿ ಅವರು ಈ ರೀತಿ ನೃತ್ಯ ಮಾಡಿದ್ದು ನೋಡಿ ಕಣ್ಣೀರು ಬಂತು. ನನ್ನದು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಎಂದರು ನಟ ಧರ್ಮ.
500ನೇ ಸಿನಿಮಾ ಆದರೂ ಮೊದಲ ಚಿತ್ರದ ಹುಮ್ಮಸಿನಲ್ಲಿ ಬಿರಾದಾರ್ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕ ಸೊಗಡಿನ ಚಿತ್ರ. ನಾನು ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ ಎಂದು ಕರಿಸುಬ್ಬು ತಿಳಿಸಿದರು.
ಹಾಡನ್ನು ಬರೆದು ಸಂಗೀತ ನೀಡಿರುವ ಶಿವು ಭೇರಗಿ, ಗಾಯಕ ರವೀಂದ್ರ ಸೊರಗಾವಿ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ವೀರ ಸಮರ್ಥ್ ಚಿತ್ರದ ಕುರಿತು ಮಾತನಾಡಿದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com