ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ…

Published on

332 Views

ಮುಂಬಯಿ : ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ‌ ವಾಹಿನಿಯ ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದ ಸುಶಾಂತ್, ಕೈ ಪೋ ಚೇ ಸಿನಿಮಾದ ಮೂಲಕ ಬಾಲಿವುಡ್ ಪ್ರವೇಶಿಸಿದ್ದ ಸುಶಾಂತ್ ಸಿಂಗ್ ರಜಪೂತ್ ಮುಂಬಯಿ ಭಾಂದ್ರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಎಮ್.ಎಸ್ ಧೋಣಿ ಜೀವನಾಧಾರಿತ ಚಿತ್ರದಲ್ಲಿ ನಾಯಕ ನಟರಾಗಿ ಮಿಂಚಿದ್ದ ಸುಶಾಂತ್ ನಂತರ ನಟಿಸಿದ ಕೇಧರ್ ನಾಥ್ ಚಿತ್ರ ಸೂಪರ್ ಕೂಡ ಹಿಟ್ ಆಗಿತ್ತು.
ನಾಲ್ಕು ದಿನದ ಹಿಂದೆ ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮುಂಬಯಿ ಬಾಂಧ್ರದ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದರೆ‌. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com