ವಿನಾಯಕನ ಸನ್ನಿಧಿಯಲ್ಲಿ “ಚಂದ್ರಲೇಖ ರಿಟರ್ನ್ಸ್” ಚಿತ್ರಕ್ಕೆ ‌ಚಾಲನೆ.

Published on

560 Views
Advertisement

ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ. ನಿರ್ದೇಶಕ ಓಂಪ್ರಕಾಶ್ ರಾವ್ ಬಹಳವರ್ಷಗಳ ನಂತರ ನಿರ್ದೇಶನಕ್ಕೆ ಮರಳಿದ್ದಾರೆ. ಓಂಪ್ರಕಾಶ್ ರಾವ್ ನಿರ್ದೇಶನದ 49 ನೇ ಚಿತ್ರವಿದು.

ಡಾರ್ಲಿಂಗ್ ಕೃಷ್ಣ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. “ಚಂದ್ರಲೇಖ ರಿಟರ್ನ್ಸ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಆನಂದರಾವ್ ಸರ್ಕಲ್ ನ‌ ಶ್ರೀವಿನಾಯಕ ದೇವಸ್ಥಾನದಲ್ಲಿ‌ ನೆರವೇರಿತು.
ಹಾರಾರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ.

Advertisement

ಶ್ರೀ ಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್ ಸಿ ಈ ಚಿತ್ರ ನಿರ್ಮಿಸುತ್ತಿದ್ದಾರೆ.ಈ ಹಿಂದೆ ರವೀಶ್ ಅವರ ನಿರ್ಮಿಸಿರುವ “ಕಸ್ತೂರಿ ಮಹಲ್” ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದೆ.

ಡಾರ್ಲಿಂಗ್ ಕೃಷ್ಣ ಅವರೊಂದಿಗೆ ಸಾಧುಕೋಕಿಲ, ನಾಗಶೇಖರ್, ವಿವಿನ್ ಸೂರ್ಯ, ಅಚ್ಯುತರಾವ್, ಸುಧಾ ಬೆಳವಾಡಿ, ಪ್ರಶಾಂತ್ ಸಿದ್ದಿ ಮುಂತಾದವರು ಈ‌ ಚಿತ್ರದ ತಾರಾಬಳಗದಲ್ಲಿದ್ದಾರೆ.ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರು ಈ ಚಿತ್ರದಲ್ಲಿ ನಟಿಸಲಿದ್ದು, ಸದ್ಯದಲ್ಲೇ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ರವೀಶ್ ಆರ್ ಸಿ ತಿಳಿಸಿದ್ದಾರೆ.

Advertisement

More Buzz

Buzz 3 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 4 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 4 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 5 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com