ನವರಸ ನಾಯಕನಿಗೆ ನಾಯಕಿಯಾಗಿ ಚಾರ್​​ಮಿನಾರ್ ಚೆಲುವೆ ಮೇಘನ…

Published on

415 Views
Advertisement

‘ಚಾರ್​​ಮಿನಾರ್ ಚೆಲುವೆ ಮೇಘನಾ ಗಾಂವ್ಕರ್​ ಮತ್ತೊಂದು ಹೊಸ ಸಿನಿಮಾ ಸಹಿ ಮಾಡಿದ್ದಾರೆ.
2010 ರಲ್ಲಿ ‘ನಮ್ ಏರಿಯಾದಲ್ಲಿ ಒಂದಿನ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಮೇಘನಾ, ‘ವಿನಾಯಕ ಗೆಳೆಯರ ಬಳಗ’, ‘ತುಘಲಕ್’, ‘ಸಿಂಪಲ್ ಆಗ್ ಇನ್ನೊಂದು ಲವ್ ಸ್ಟೋರಿ’ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. 9 ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಸ್ವಲ್ಪ‌ ಗ್ಯಾಪ್ ತೆಗೆದುಕೊಂಡಿದ ಮೇಘನಾ ಸದ್ಯ ನವರಸ ನಾಯಕ ಜಗ್ಗೇಶ್​ ಜತೆ ‘ಕಾಳಿದಾಸ ಕನ್ನಡ ಮೇಷ್ಟ್ರು’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಗೀತ ಸಾಹಿತಿ ಹಾಗೂ ನಿರ್ದೇಶಕ ಕವಿರಾಜ್ ಅವರ ಈ ಚಿತ್ರ ಮುಗಿಯುತ್ತಿದ್ದಂತೆ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಕಿರು ಚಿತ್ರಗಳ ನಿರ್ದೇಶಕ ಸಂತೋಷ್. ಜಿ ಅವರ ಹೊಸ ಚಿತ್ರಕ್ಕೆ ಮೇಘನಾ ನಾಯಕಿಯಾಗುತ್ತಿದ್ದಾರೆ. ಈ ಚಿತ್ರದಲ್ಲಿ ಒಂದು ಮದುವೆ ಸುತ್ತ ಬರುವ ನಾಲ್ಕು ಉಪಕತೆಗಳು ಬಹಳ ಇಷ್ಟವಾಯಿತು. ಅದಕ್ಕೆ ಈ ಸಿನಿಮಾ ಒಪ್ಪಿಕೊಂಡೆ ಎಂದು ಮೇಘನಾ ತಿಳಿಸುತ್ತಾರೆ.

ಇನ್ನೂ ಹೆಸರಿಡದ ಈ ಚಿತ್ರಕ್ಕೆ ಸಿದ್ದಾರ್ಥ್​ ನಾಯಕ ಆಗಿ ಆಯ್ಕೆ ಆಗಿದ್ದಾರೆ. ಜುಲೈ ತಿಂಗಳಿನಲ್ಲಿ ಸೆಟ್ಟೇರಲಿರುವ ಈ ಸಿನಿಮಾಕ್ಕೆ ಜೂಡಾ ಸ್ಯಾಂಡಿ ಸಂಗೀತ, ರಾಕೇಶ್ ರಾಜ್ ಛಾಯಾಗ್ರಹಣ ಮಾಡಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com