ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ, ಪಾಂಡ್ಯ, ರಾಹುಲ್‌ಗೆ ₹ 20 ಲಕ್ಷ ದಂಡ

Published on

224 Views
Advertisement

ಟಿವಿ ರಿಯಾಲಿಟಿ ಶೋನಲ್ಲಿ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಭಾರತ ಕ್ರಿಕೆಟ್‌ ತಂಡದ ಆಟಗಾರರಾದ ಹಾರ್ದಿಕ್‌ ಪಾಂಡ್ಯ ಹಾಗೂ ಕೆ.ಎಲ್‌.ರಾಹುಲ್‌ ಅವರಿಗೆ ಬಿಸಿಸಿಐ ತಲಾ ₹ 20 ಲಕ್ಷ ದಂಡ ವಿಧಿಸಿದೆ.

ಒಂಬುಡ್ಸ್‌ಮನ್ ಡಿ.ಕೆ.ಜೈನ್‌ ಅವರು ಈ ಆದೇಶ ಹೊರಡಿಸಿದ್ದು, ₹ 10 ಲಕ್ಷವನ್ನು ಅರೆ ಸೇನಾಪಡೆಯ ಹುತಾತ್ಮ ಯೋಧರ ಪತ್ನಿಯರ ಕಲ್ಯಾಣಕ್ಕಾಗಿ ನೀಡಬೇಕು. ಉಳಿದ ₹ 10 ಲಕ್ಷವನ್ನು ಅಂಧರ ಕ್ರಿಕೆಟ್‌ ಸಂಸ್ಥೆಯ ನಿಧಿಗೆ ನೀಡಬೇಕು ಎಂದು ಸೂಚಿಸಿದ್ದು,  ನಾಲ್ಕು ವಾರದೊಳಗಾಗಿ ದಂಡ ಪಾವತಿಸಲು ತಿಳಿಸಲಾಗಿದೆ. ಇಲ್ಲವಾದರೆ ಬಿಸಿಸಿಐ ಮುಂದಿನ ಪಂದ್ಯಗಳ ಸಂಭಾವನೆಯಲ್ಲಿ ಭರಿಸಿಕೊಳ್ಳಲಿದೆ ಎಂದು ಜಾಲತಾಣದಲ್ಲಿ ಎಚ್ಚರಿಸಲಾಗಿದೆ.

Advertisement

‘ಆಟಗಾರರು ಕಾರ್ಯಕ್ರಮದಲ್ಲಿ ನೀಡಿದ್ದ ಹೇಳಿಕೆಗಳು ಸೂಕ್ಷ್ಮವಾಗಿದ್ದು, ಸಭ್ಯತೆಯ ಮಟ್ಟ ಮೀರಿವೆ. ಕ್ರಿಕೆಟಿಗರು ವಿಶೇಷವಾಗಿ ಯುವಜನತೆಯ ಮೇಲೆ ಅಗಾಧ ಪ್ರಭಾವ ಬೀರುತ್ತಾರೆ. ಅಭಿಮಾನಿಗಳು ಕೇವಲ ಅವರ ಆಟವನ್ನು ಮಾತ್ರ ನೋಡುವುದಿಲ್ಲ. ನಡವಳಿಕೆಯನ್ನೂ ಗಮನಿಸುತ್ತಾರೆ ಎಂದಿದ್ದಾರೆ.

ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್‌’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಈ ಇಬ್ಬರು ಆಟಗಾರರು ಲೈಂಗಿಕತೆ ಕುರಿತು ಮಾತನಾಡಿದ್ದರು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com