2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಪ್ರಕಟ
2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಸ್ಯಾಂಡಲ್‌ವುಡ್ ನ ಇಬ್ಬರು ಸ್ಟಾರ್ ನಟರಾದ ಶಿವರಾಜ್ ಕುಮಾರ್ ಹಾಗೂ ರಕ್ಷಿತ್ ಶೆಟ್ಟಿ ಈ ದಾದಾ ಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಕನ್ನಡ ,ತಮಿಳು, ತೆಲುಗು ಮತ್ತು ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ನಾಲ್ಕು ಭಾಷೆಯ ನಟ- ನಟಿಯರನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಶಿವರಾಜ್ ಕುಮಾರ್, ಅಜಿತ್, ಮೋಹನ್ ಲಾಲ್, ನಾಗಾರ್ಜುನ್ ಅಕ್ಕಿನೀನಿ ಅವರಿಗೆ 2020ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಸೌತ್ ಬಹುಮುಖ ನಟರು ಪ್ರಶಸ್ತಿ ದೊರತಿದೆ. ಕನ್ನಡದಲ್ಲಿ ಅವನೇ ‘ಶ್ರೀಮನ್ನಾರಾಯಣ’ ಸಿನಿಮಾ ಅಭಿನಯಕ್ಕಾಗಿ ನಟ ರಕ್ಷಿತ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರತಿದೆ. ಇನ್ನು ‘ಯಾಜಮಾನ’ ಚಿತ್ರದ ನಟನೆಗೆ ನಟಿ ತಾನ್ಯಾ ಹೋಪ್ ಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.
ತೆಲುಗಿನಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿ ರಶ್ಮಿಕಾ ಮಂದಣ್ಣ ಪಾಲಾಗಿದೆ. ‘ಮೂಕಜ್ಜಿಯ ಕನಸುಗಳು’ ಸಿನಿಮಾ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ನಿರ್ದೇಶಕ ‘ಪ್ರಿಮಿಯರ್ ಪದ್ಮಿನಿ’ ಚಿತ್ರದ ನಿರ್ದೇಶಕ ರಮೇಶ್ ಇಂದಿರಾ ಪಾಲಾಗಿದೆ. ಅತ್ಯುತ್ತಮ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಪಡೆದುಕೊಂಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಯಶ್ ಪಡೆದುಕೊಂಡಿದ್ದರು. ಈ ಬಾರಿಯ ದಾದಾಸಾಹೇಬ್ ಫಾಲ್ಕೆ ಸೌತ್ ಪ್ರಶಸ್ತಿಗೆ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಯಾವಾಗ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂಬ ಮಾಹಿತಿ ಇನ್ನು ಬಹಿರಂಗವಾಗಿಲ್ಲ.