ಡಿಯರ್ ವಿಕ್ರಮ್ ಟ್ರೇಲರ್ ಬಿಡುಗಡೆ

Published on

411 Views

*ಇದೇ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಬರಲಿದೆ ನೀನಾಸಂ ಸತೀಶ್ ಅಭಿನಯದ ಸಿನಿಮಾ!*
ಕ್ರಾಂತಿಕಾರಿಯೊಬ್ಬನ ಪ್ರೇಮಕತೆಯನ್ನೊಳಗೊಂಡ ವಿಭಿನ್ನ ಸಿನಿಮಾ ‘ಡಿಯರ್ ವಿಕ್ರಮ್’ ನ ಟ್ರೇಲರ್ ಬಿಡುಗಡೆಯಾಗಿದ್ದು, ಜೂನ್ ಮೂವತ್ತರಂದು ವೂಟ್ ಸೆಲೆಕ್ಟ್ ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಚಲನಚಿತ್ರ ‘ಡಿಯರ್ ವಿಕ್ರಮ್’ ನಲ್ಲಿ ಹೆಸರಾಂತ ನಟ ನೀನಾಸಂ ಸತೀಶ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಕೆಲದಿನಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಚಿತ್ರದ ಟೀಸರ್ ಸಿನಿರಸಿಕರ ಗಮನ ಸೆಳೆದಿತ್ತು. ಈಗ ಬಿಡುಗಡೆಯಾಗಿರುವ ಟ್ರೇಲರ್ ಆ ಕುತೂಹಲವನ್ನು ಇಮ್ಮಡಿಗೊಳಿಸಿದೆ.

ಬಿಗಿಯಾದ ಚಿತ್ರಕತೆ ಹಾಗೂ ಮನಮುಟ್ಟುವ ಅಭಿನಯದಿಂದಾಗಿ ಈ ಸಿನಿಮಾ ಪರಿಣಾಮಕಾರಿಯಾಗಿ ಮೂಡಿಬಂದಿದೆ ಎಂಬುದಕ್ಕೆ ಟ್ರೇಲರಿನಲ್ಲಿ ಸೂಚನೆಗಳಿವೆ. ಹಲವು ಉತ್ತಮ ಚಿತ್ರಗಳನ್ನು ನಿರ್ದೇಶಿಸಿರುವ ಜೇಕಬ್ ವರ್ಗೀಸ್ ತಂಡದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ ಅನುಭವವಿರುವ ಕೆ ಎಸ್ ನಂದೀಶ್ ‘ಡಿಯರ್ ವಿಕ್ರಮ್’ ಸಿನಿಮಾವನ್ನು ಬರೆದು ನಿರ್ದೇಶಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಹಾಸನ, ಭಟ್ಕಳ, ಕರ್ನೂಲ್ ಅಲ್ಲದೆ ಮಲೇಶಿಯಾದಲ್ಲೂ ಚಿತ್ರೀಕರಣ ಮಾಡಲಾಗಿದೆ.
ತಮ್ಮ ಹೊಸ ಸಿನಿಮಾದ ಬಗ್ಗೆ ಉತ್ಸುಕರಾಗಿ ಮಾತಾಡಿದ ನಟ ಸತೀಶ್, ‘ಶ್ರದ್ಧಾ ಶ್ರೀನಾಥ್ ಅವರೊಂದಿಗೆ ಇದು ನನ್ನ ಮೊದಲ ಸಿನಿಮಾ. ವಸಿಷ್ಟ ಸಿಂಹ, ಸೋನು ಗೌಡ ಅಚ್ಯುತ್ ಕುಮಾರ್ ಮುಂತಾದ ಹಲವು ಹೆಸರಾಂತ ನಟ ನಟಿಯರು ಚಿತ್ರಕ್ಕೆ ತಮ್ಮ ಪ್ರತಿಭೆಯನ್ನು ಧಾರೆಯೆರೆದಿದ್ದಾರೆ ’ ಎಂದರು. ನಟಿ ಶ್ರದ್ಧಾ ಶ್ರೀನಾಥ್ ಮಾತನಾಡಿ, ‘ವಾಸ್ತವವನ್ನು ಬಣ್ಣದ ಕನ್ನಡಕದೊಳಗಿನಿಂದ ಮಾತ್ರ ನೋಡಿ ಬೆಳೆದ ಹುಡುಗಿಯ ಪಾತ್ರ ನನ್ನದು’ ಎಂದರು. ಈ ಪಾತ್ರವನ್ನು ಎಂದೂ ಮರೆಯೋಕಾಗಲ್ಲ ಎಂದೂ ಅವರು ತಿಳಿಸಿದರು.

ನಿರ್ದೇಶಕ ನಂದೀಶ್ ಚಿತ್ರೀಕರಣದ ವೇಳೆ ನಡೆದ ಘಟನೆಯೊಂದನ್ನು ಬಿಚ್ಚಿಟ್ಟರು. ಶೂಟಿಂಗಿಗೆ ಹೋಗುವಾಗ ಮೊಣಕಾಲೆತ್ತರ ಇದ್ದ ನದಿ ನೀರು ವಾಪಾಸ್ ಬರುವಾಗ ಎದೆ ಮಟ್ಟಕ್ಕೆ ಏರಿದಾಗ ಚಿತ್ರತಂಡಕ್ಕಾದ ಆತಂಕವನ್ನು ಅವರು ನೆನಪಿಸಿಕೊಂಡರು. ಆಗ ಭಯವಾಗಿದ್ದರೂ ಈಗದು ಹಿತವಾದ ನೆನಪು ಎಂದು ಅವರು ಹೇಳಿದರು.
ಈಗ ಬಿಡುಗಡೆಯಾಗಿರುವ ಟ್ರೇಲರನ್ನು ನೀವು ಸವಿದು ಮುಗಿಸುವುದರೊಳಗೇ ಡಿಯರ್ ವಿಕ್ರಮ್ ಸಿನಿಮಾ ವೂಟ್ ಸೆಲೆಕ್ಟ್ ನಲ್ಲಿ ನೇರವಾಗಿ ಇದೇ ಜೂನ್ 30ರಂದು ಬರಲಿದೆ.

More Buzz

Buzz 4 days ago

Swastik Productions celebrates the iconic success of Shrimad Ramayan and the grand launch of Veer Hanuman

Trailers 10 months ago

Rudra Garuda Purana Official Teaser Starring Rishi, Priyanka

Trailers 10 months ago

Pepe Kannada Movie Trailer Starring Vinay Rajkumar

BuzzKollywood Buzz 10 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 10 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 10 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 10 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 10 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 10 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 10 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 10 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 10 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

Copyright ©2025 . All Rights Reserved. privacy | terms Whatsapp: 9538193653 Email: hello@flixoye.com