ಬಂಡೀಪುರದಲ್ಲಿ ರಾತ್ರಿ ವೇಳೆ ಸಫಾರಿ ಮಾಡಿದ ನಟ ಧನ್ವೀರ್…

Published on

358 Views

ರಾತ್ರಿ ವೇಳೆ ಕಾನೂನು ಬಾಹಿರವಾಗಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿರುವ ನಟ ಧನ್ವೀರ್ ಗೆ ಈಗ ಸಂಕಷ್ಟ ಎದುರಾಗಿದೆ. ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧವಿದ್ದರೂ ಧನ್ವೀರ್ ಹಾಗೂ ಅವರ ಸ್ನೇಹಿತರು ರಾತ್ರಿ ವೇಳೆ ಸಫಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ನೋಡಿದವರು ಈ‌ ನಟನ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದಾರೆ. “ರಾತ್ರಿ ಸಮಯದಲ್ಲಿ ಸಫಾರಿ ನಡೆಸಿರುವ ನಟ ಧನ್ವೀರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು, ಒಂದು ವೇಳೆ ಇದರಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದರೆ ಅವರ ವಿರುದ್ಧ ಸಹ ಶಿಸ್ತು ಕ್ರಮ ಜರುಗಿಸುತ್ತೇವೆ” ಎಂದು ಬಂಡೀಪುರ ಸಿಎಫ್ಒ ಬಾಲಚಂದ್ರ ಹೇಳಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com