ಅರಳಲಿವೆ ಮತ್ತಷ್ಟು ಮೊಗ್ಗಿನ ಮನಸ್ಸುಗಳು ನಿರ್ದೇಶಕ ಶಶಾಂಕ್ ಮತ್ತಷ್ಟು ಹೊಸ ಪ್ರತಿಭೆಗಳನ್ನು ಬೆಳ್ಳಿತೆರೆಗೆ ಪರಿಚಯಿಸಲು ಸಿದ್ಧರಾಗಿದ್ದಾರೆ

Published on

424 Views
Advertisement

ಮೊಗ್ಗಿನ ಮನಸ್ಸು” ಚಿತ್ರದ ನಂತರ ನಿರ್ದೇಶಕ ಶಶಾಂಕ್, ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. “ಶಶಾಂಕ್ ಸಿನೆಮಾಸ್” ಸಂಸ್ಥೆಯಡಿ, ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ನಿರ್ಮಾಣವಾಗಲಿರುವ ಈ ಚಿತ್ರದ ಮುಖಾಂತರ, “ಪ್ರವೀಣ್” ಎಂಬ ಹೊಸ ನಾಯಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ವೈದ್ಯಕೀಯ ಪದವೀಧರರಾದ ಪ್ರವೀಣ್, ಹೊಸಪೇಟೆ ಮೂಲದವರಾಗಿದ್ದು, ನಟನಾಗುವ ಆಸಕ್ತಿಯಿಂದ ಅದಕ್ಕೆ ಬೇಕಾಗುವ ಎಲ್ಲಾ ತರಬೇತಿಗಳನ್ನು ಪಡೆದು ಬೆಳ್ಳಿತೆರೆ ಏರಲು ಸಜ್ಜಾಗಿದ್ದಾರೆ.

ಇನ್ನೂ ಶೀರ್ಷಿಕೆ ನಿಗದಿಯಾಗದ, ಭಾವುಕ ಪ್ರೇಮಕಥೆಯ ಈ ಚಿತ್ರಕ್ಕೆ ಶಶಾಂಕ್ ಹೊಸ ನಾಯಕಿಯ ಹುಡುಕಾಟದಲ್ಲಿದ್ದಾರೆ. ಲಾಕ್ಡೌನ್ ಗೂ ಮುನ್ನ ಸರಳವಾಗಿ ಮುಹೂರ್ತ ನೆರವೇರಿದ್ದು, ಲಾಕ್ಡೌನ್ ಮುಗಿದ ನಂತರ ಫೋಟೋಶೂಟ್ ಮಾಡಿ, ಶೀರ್ಷಿಕೆಯ ಜೊತೆ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

Advertisement

ಜೂನ್ ತಿಂಗಳಲ್ಲಿ ಚಿತ್ರೀಕರಣ ಆರಂಭಿಸಲಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಲಿದ್ದು, ಉಳಿದ ತಾರಾಗಣ ಮತ್ತು ತಾಂತ್ರಿಕ ವರ್ಗದ ಆಯ್ಕೆ ನಡೆಯುತ್ತಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com