‘ರೂಮ್ ಬಾಯ್’ ಚಿತ್ರಕ್ಕೆ ಸಾಥ್ ಕೊಟ್ಟ ಡಾಲಿ ಧನಂಜಯ…

Published on

935 Views
Advertisement

ಸೈಕಾಲಜಿಕಲ್ ಸಸ್ಪೆನ್ಸ್ ಕಂ ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ರೂಮ್ ಬಾಯ್’ ಚಿತ್ರ ತನ್ನ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ಧವಾಗಿದೆ. ಹೊಸ ಪ್ರತಿಭೆಗಳು ಸೇರಿಕೊಂಡು ನಿರ್ಮಿಸಿರುವ ‘ರೂಮ್ ಬಾಯ್’ ಚಿತ್ರದ ಟೀಸರ್ ಇತ್ತೀಚೆಗಷ್ಟೆ ನಟ ಡಾಲಿ ಧನಂಜಯ ಬಿಡುಗಡೆಗೊಳಿಸಿ ಹೊಸಬರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಭಾಷಣೆಕಾರನಾಗಿ, ಸಹಾಯಕ ನಿರ್ದೇಶಕನಾಗಿ ಚಿತ್ರರಂಗದಲ್ಲಿ ಒಂದು‌ ದಶಕದ ಕಾಲ ಸಿನಿಮಾಗಳಿಗೆ ಕೆಲಸ ಮಾಡಿ ಅನುಭವವಿರುವ ರವಿ‌ ನಾಗಡದಿನ್ನಿ ಮೊದಲ ಬಾರಿಗೆ ‘ರೂಮ್ ಬಾಯ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

Advertisement

‘ಅಪರೇಷನ್ ನಕ್ಷತ್ರ’, ‘ಲೈಫ್ ಸೂಪರ್’, ‘ಗ್ರಾಮ’ ಮೊದಲಾದ ಸಿನಿಮಾಗಳಲ್ಲಿ ನಾಯಕ‌ ನಟನಾಗಿ ನಟಿಸಿರುವ ಲಿಖಿತ್ ಸೂರ್ಯ ‘ರೂಮ್ ಬಾಯ್’ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು, ಐಕಾನ್ ಪ್ರೊಡಕ್ಷನ್ ಬ್ಯಾನರ್ ಅಡಿ ನಿರ್ಮಾಪಕನಾಗಿ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಲಿಖಿತ್ ಸೂರ್ಯಗೆ ಚಿತ್ರದಲ್ಲಿ ರಕ್ಷಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ವರ್ಧನ್, ಯಶ್ ಶೆಟ್ಟಿ, ಅಶ್ವಿನ್ ಹಾಸನ್, ರಘು ಶಿವಮೊಗ್ಗ, ಚೇತನ್ ದುರ್ಗಾ, ವಜ್ರಂಗ ಶೆಟ್ಟಿ, ಪದ್ಮಿನಿ, ರಾಹುಲ್, ರೋಷನ್, ರಜನಿ, ವಿಕ್ಕಿ, ಯಶಾ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ‘ರೂಮ್ ಬಾಯ್’ ಸಿನಿಮಾಕ್ಕೆ ಧನಪಾಲ್ ನಾಯಕ್ ಛಾಯಾಗ್ರಹಣ ಮಾಡಿದ್ದು, ರೋಣದ ಬಕ್ಕೇಶ್ ಸಂಗೀತವಿದೆ. ಸದ್ಯ ಟೀಸರ್ ಬಿಡುಗಡೆಯಾಗಿದ್ದು, ಎಪ್ರಿಲ್, ಮೇ ತಿಂಗಳಲ್ಲಿ ಚಿತ್ರ ತೆರೆಗೆ ಬರುವ ಸಾಧ್ಯತೆ ‌ಇದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com