flixOye
Buzz

Ragini Dwivedi : ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಆಸ್ಪತ್ರೆಗೆ ದಾಖಲು

Ragini Dwivedi : ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಆಸ್ಪತ್ರೆಗೆ ದಾಖಲು

ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಉಸಿರಾಟದ ಸಮಸ್ಯೆ ಹಾಗೂ ಹೊಟ್ಟೆ ನೋವು ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Ragini Dwivedi
3 ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿರುವ ನಟಿ ರಾಗಿಣಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ‌ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಅದನ್ನು ಜನವರಿಗೆ ಮುಂದೂಡಲಾಗಿತ್ತು.

ಈ ನಡುವೆ ಇದೇ ಡ್ರಗ್ಸ್ ಪ್ರಕರಣದಲ್ಲಿ ಜೈಲು‌ ಸೇರಿದ್ದ ನಟಿ‌ ಸಂಜನಾಗೆ ಆರೋಗ್ಯ ಸಮಸ್ಯೆ ಇದ್ದ ಕಾರಣ ನ್ಯಾಯಾಲಯ ಷರತ್ತುಬದ್ಧ ಜಾಮೀನು‌ ನೀಡಿದ್ದು, ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈಗ ನಟಿ ರಾಗಿಣಿಗೂ ಆರೋಗ್ಯ ಸಮಸ್ಯೆ ಉಂಟಾಗಿದ್ದು, ನ್ಯಾಯಾಲಯ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಕಾದು ನೋಡಬೇಕಷ್ಟೇ.

ಸಂಬಂಧಿತ · Related