ಕೊನೆಗೂ ಸಿಕ್ಕಿ ಬಿದ್ದ ದುನಿಯಾ ವಿಜಿ.

Published on

308 Views

‘ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಮೃತಪಟ್ಟಿದ್ದ ಇಬ್ಬರು ಕಲಾವಿದರ ಕುರಿತಂತೆ ನಿರ್ಮಾಪಕ ಸುಂದರ್ ಪಿ. ಗೌಡ ಅವರನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ನಿರ್ಮಾಪಕರು ತಪ್ಪಿಸಿಕೊಳ್ಳಲು ಸಹಕರಿಸಿದ್ದ ಹಿನ್ನಲೆಯಲ್ಲಿ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ವಿಜಯ್ ತಲೆ ಮರೆಸಿಕೊಂಡು ಕಾಣೆಯಾಗಿದ್ದರು.

ನಟ ದುನಿಯಾ ವಿಜಿ ಇಷ್ಟು ದಿನ ಪೋಲಿಸರ ಕಣ್ಣಿನಿಂದ ತಪ್ಪಿಸಿಕೊಂಡಿದ್ದರು. ಆದರೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ತಲೆ ಮರೆಸಿಕೊಂಡಿದ್ದ ನಟ ದುನಿಯಾ ವಿಜಯ್ ವಿರುದ್ಧ ಎಫ್’ಐಆರ್ ದಾಖಲಾಗಿತ್ತು. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ದುನಿಯಾ ವಿಜಿಗಾಗಿ ತೀವ್ರ ಹುಡುಕಾಟ ನಡೆಸಿದ್ದರು. ಕೊನೆಗೆ ದುನಿಯಾ ವಿಜಿಗಾಗಿ ವಿಶೇಷ ತಂಡ ರಚನೆ ಮಾಡಿದ್ದ ಪೋಲೀಸರು, ಮೊಬೈಲ್ ನೆಟ್ವರ್ಕ್ ಆಧರಿಸಿ ತಮಿಳುನಾಡಿನಲ್ಲಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com