ದೊಡ್ಡ ಗಣಪತಿ ‌ಸನ್ನಿಧಾನದಲ್ಲಿ ಬನಾರಸ್ ಚಿತ್ರದ ಚಿತ್ರೀಕರಣ ಪೂರ್ಣ.

Published on

400 Views
Advertisement

ಭಾರತದ ಪರಮಪವಿತ್ರ ಪುಣ್ಯಕ್ಷೇತ್ರ ಕಾಶಿ. ಇದನ್ನು ಬನಾರಸ್ ಅಂತಲೂ ಕರೆಯುತ್ತಾರೆ. ಈಗ ಬನಾರಸ್ ಹೆಸರಿನಲ್ಲಿ ಕನ್ನಡ ಚಿತ್ರ ನಿರ್ಮಾಣವಾಗಿದ್ದು, ಚಿತ್ರೀಕರಣ ಸಹ ಮುಕ್ತಾಯವಾಗಿದೆ. ಇತ್ತೀಚೆಗೆ ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಾಂಕೇತಿಕವಾಗಿ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು.

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿ ಚಿತ್ರಗಳ ನಿರ್ದೇಶನಕ್ಕೆ ಹೆಸಾರಾಗಿರುವ ಜಯತೀರ್ಥ ಬನಾರಸ್ ಚಿತ್ರವನ್ನು ನಿರ್ದೇಶಿಸಿದ್ದಾರೆ.ಶಾಸಕ ಜಮೀರ್ ಅಹಮದ್ ಖಾನ್ ಪುತ್ರ‌ ಜೈದ್ ಖಾನ್ ಈ‌ ಚಿತ್ರದ‌ ಮೂಲಕ ನಾಯಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ.
ದೇವರಾಜ್, ಅಚ್ಯುತ‌ಕುಮಾರ್, ಸುಜಯ್ ಶಾಸ್ತ್ರಿ, ಸ್ವಪ್ನ ರಾಜ್, ಬರ್ಕತ್ ಆಲಿ, ಚಿರಂತ್, ರೋಹಿತ್ ಮುಂತಾದವರು ಬನಾರಸ್ ನ‌ ತಾರಾಬಳಗದಲ್ಲಿದ್ದಾರೆ.

Advertisement

ಚಿತ್ರದ ಸುಮಧುರ ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಹರ್ಷ ನೃತ್ಯ ನಿರ್ದೇಶನ ಹಾಗೂ ವಿಜಯ್ ಮಾಸ್ಟರ್, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ರಶ್ಮಿ ವಸ್ತ್ರವಿನ್ಯಾಸ ಮಾಡಿದ್ದಾರೆ.

Advertisement

ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಿಲಕ್ ರಾಜ್ ಬಲ್ಲಾಳ್ ನಿರ್ಮಿಸಿರುವ ಈ ಚಿತ್ರಕ್ಕೆ ಮುಜಮ್ಲಿಲ್‌ ಅಹಮದ್ ಖಾನ್ ಅವರ ಸಹ ನಿರ್ಮಾಣವಿದೆ.

ವಿಭಿನ್ನ ಪ್ರೇಮಕಥೆಯ ಹೊಂದಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕಾಶಿಯಲ್ಲಿ ನಡೆದಿದೆ.‌‌ ಕಾಶಿಗೂ ಚಿತ್ರದ ಕಥೆಗೂ ಸಂಬಂಧವಿದೆ ಹಾಗಾಗಿ ಅಲ್ಲೇ ಹಿಚ್ಚಿನ‌ ಚಿತ್ರೀಕರಣವಾಗಿದೆ.
ಸಹಜ ಸೌಂದರ್ಯದ ಕಾಶಿಯ ಎಲ್ಲಾ ಘಾಟ್ ನಲ್ಲೂ ಬನಾರಸ್ ಚಿತ್ರದ ಚಿತ್ರೀಕರಣ ನಡೆದಿದೆ. ಉಳಿದಂತೆ ಬೆಂಗಳೂರು, ಮೈಸೂರು, ಗೋವಾದಲ್ಲೂ ಚಿತ್ರೀಕರಣವಾಗಿದೆ.

Advertisement

ಇಲ್ಲಿಯವರೆಗೆ ಯಾವ ಕನ್ನಡ ಚಿತ್ರಗಳ ಚಿತ್ರೀಕರಣ ಸಹ ಕಾಶಿಯಲ್ಲಿ‌ ಇಷ್ಟು ದಿನ ನಡಿದಿಲ್ಲ. ಬಹುಶಃ ಇದೇ ಮೊದಲು.
ಕಾಶಿಯ ಪರಂಪರೆ, ಸಂಸ್ಕೃತಿ ಹಾಗೂ ಅಲ್ಲಿನ ಪಾತ್ರಗಳನ್ನು ಬನಾರಸ್ ಚಿತ್ರದಲ್ಲಿ ಕಣ್ತುಂಬಿಕೊಳ್ಳಬಹುದು ಎಂದು ನಿರ್ದೇಶಕ ಜಯತೀರ್ಥ ತಿಳಿಸಿದ್ದಾರೆ.

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com