ಚಿತ್ರನಿರ್ದೇಶಕ ನಾಗೇಶ್ ಬಾಬ ಇನ್ನಿಲ್ಲ

Published on

377 Views
Advertisement

ಹಿರಿಯ ಚಿತ್ರನಿರ್ದೇಶಕ ನಾಗೇಶ್ ಬಾಬ (82) ಅಗಲಿದ್ದಾರೆ. ಮಂಡ್ಯ ಜಿಲ್ಲೆ ಬೆಳಕವಾಡಿ ಅವರ ಹುಟ್ಟೂರು. ಬೆಂಗಳೂರಿನಲ್ಲಿ ಬಿಎಸ್ಸಿ ಪದವಿ ಮುಗಿಸಿದ ಅವರು ಚಿತ್ರರಂಗದಲ್ಲಿ ಕೆಲಸ ಮಾಡುವ ಇರಾದೆಯಿಂದ 1956ರಲ್ಲಿ ಮದರಾಸಿಗೆ ತೆರಳುತ್ತಾರೆ. ಆರ್.ನಾಗೇಂದ್ರರಾವ್ ನಿರ್ದೇಶನದ ‘ಪ್ರೇಮದ ಪುತ್ರಿ’ (1957) ಚಿತ್ರದ ಸಹಾಯಕ ನಿರ್ದೇಶಕರಾಗಿ ಅವರ ಚಿತ್ರರಂಗದ ನಂಟು ಆರಂಭವಾಯ್ತು.

‘ಬೆಟ್ಟದ ಕಳ್ಳ’, ‘ಪ್ರತಿಮಾ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಗೇಶ್ ಬಾಬ ಅವರು ‘ಕೋಟಿ ಚೆನ್ನಯ’ ತುಳು ಚಿತ್ರಕ್ಕೆ ತಾಂತ್ರಿಕ ನಿರ್ದೇಶಕರಾಗಿ ದುಡಿದಿದ್ದಾರೆ. ‘ತೂಗುದೀಪ’, ‘ನನ್ನ ಕರ್ತವ್ಯ’ ಚಿತ್ರಗಳಿಗೆ ಸಂಭಾಷಣೆ ರಚಿಸಿದ್ದಾರೆ. ‘ಅನಿರೀಕ್ಷಿತ’ (1970) ಅವರು ನಿರ್ಮಿಸಿ, ನಿರ್ದೇಶಿಸಿದ ಸಿನಿಮಾ. ಕೃಷ್ಣಮೂರ್ತಿ ಪುರಾಣಿಕರ ‘ವಸುಂಧರೆ’ ಕೃತಿಯನ್ನು ಆಧರಿಸಿದ ಪ್ರಯೋಗವಿದು. ಚಿತ್ರಕ್ಕೆ ವಿಜಯಭಾಸ್ಕರ್ ಸಂಯೋಜಿಸಿದ ಎರಡು ಟ್ಯೂನ್‌ಗಳಿಗೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರು ಮದರಾಸಿಗೆ ತೆರಳಿ ಗೀತೆ ರಚಿಸಿಕೊಟ್ಟಿದ್ದು ವಿಶೇಷ. ಈ ಸಿನಿಮಾ ತೆರೆಕಂಡು ಈ ಹೊತ್ತಿಗೆ ಐವತ್ತು ವರ್ಷ.

Advertisement

ಕನ್ನಡ ಸಿನಿಮಾ ಸ್ಥಿರಚಿತ್ರ ಛಾಯಾಗ್ರಹಣ ವಿಭಾಗದಲ್ಲಿ ನಾಗೇಶ್ ಬಾಬ ಅವರ ಕೊಡುಗೆ ಸ್ಮರಣೀಯ. ಮದರಾಸಿನಲ್ಲಿ ವೆಂಕಟೇಶ್ವರನ್ ಅವರೊಡಗೂಡಿ ‘ತ್ರೀ ಸ್ಟಾರ್ಸ್’ ಸ್ಥಿರಚಿತ್ರ ಛಾಯಾಗ್ರಹಣ ಸಂಸ್ಥೆ ಆರಂಭಿಸಿದರು (1964). ಮುಂದೆ ಬೆಂಗಳೂರಿಗೆ ಮರಳಿದ ನಂತರ ಗಾಂಧಿನಗರದ 6ನೇ ಕ್ರಾಸ್‌ನಲ್ಲಿ ‘ಪ್ರಗತಿ’ ಸ್ಟುಡಿಯೋ ಆರಂಭಿಸಿದರು (1972). ಸಹೋದರ (ಚಿಕ್ಕಪ್ಪನ ಮಗ) ಅಶ್ವತ್ಥ ನಾರಾಯಣ ಅವರು ನಾಗೇಶ್ ಬಾಬರಿಗೆ ಇಲ್ಲಿ ಜೊತೆಯಾದರು. ಮುಂದೆ ‘ಪ್ರಗತಿ’ ಸ್ಟುಡಿಯೋ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸ್ಥಾನ ಪಡೆಯಿತು. ಸುಮಾರು 350ಕ್ಕೂ ಹೆಚ್ಚು ಸಿನಿಮಾಗಳಿಗೆ ‘ಪ್ರಗತಿ’ಯ ಸ್ಥಿರಚಿತ್ರ ಛಾಯಾಗ್ರಾಹಣವಿದೆ. ಚಿತ್ರನಿರ್ದೇಶಕರು, ನಟ-ನಟಿಯರಿಗೆ ‘ಪ್ರಗತಿ’ ಆಗ ಮೀಟಿಂಗ್ ಪಾಯಿಂಟ್ ಆಗಿತ್ತು.

ಚಿತ್ರರಂಗದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಲ್ಲದೆ ತೆರೆಮರೆಯಲ್ಲಿ ಕನ್ನಡ ಸಿನಿಮಾಗೆ ನಾಗೇಶ್ ಬಾಬ ಅವರ ಕೊಡುಗೆ ದೊಡ್ಡದಿದೆ. ಹಲವು ವರ್ಷಗಳ ಕಾಲ ಅವರು ಮದರಾಸಿನಲ್ಲಿದ್ದ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸೂಪರಿಂಟೆಂಡ್ ಆಗಿ ಕಾರ್ಯನಿರ್ವಹಿದ್ದರು. ಆಗೆಲ್ಲಾ ಕನ್ನಡ ನಿರ್ಮಾಪಕರು, ನಿರ್ದೇಶಕರಿಗೆ ತಮ್ಮ ಶಿಫಾರಸು ಬಳಸಿ ಕಚ್ಛಾ ಫಿಲ್ಮ್ ದೊರಕಿಸಿಕೊಡುವಲ್ಲಿ ನೆರವಾಗುತ್ತಿದ್ದರು. 2005ರಲ್ಲಿ ‘ಪ್ರಗತಿ’ ಸ್ಟುಡಿಯೋ ಕಾರ್ಯ ಸ್ಥಗಿತಗೊಳಿಸಿದ ನಂತರ ಅವರು ಚಿತ್ರರಂಗದಿಂದ ದೂರವೇ ಉಳಿದಿದ್ದರು.

Advertisement

ಅದ್ವೈತವನ್ನು ಪ್ರತಿಪಾದಿಸಿದ ನಿಸರ್ಗದತ್ತ ಮಹಾರಾಜ್ ಅವರ ಕುರಿತು ನಾಗೇಶ್ ಬಾಬ ಅವರು ತಯಾರಿಸಿದ (2009) ‘ತತ್ವಮಸಿ – ಯು ಆರ್ ದಟ್’ 87 ನಿಮಿಷಗಳ ಇಂಗ್ಲಿಷ್ ಸಾಕ್ಷ್ಯಚಿತ್ರ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರದರ್ಶನಗೊಂಡಿದೆ. ಮರಾಠಿಯಲ್ಲೂ (ನಿರ್ಗುಣಚೆ ಭೇದಿ) ಈ ಸಾಕ್ಷ್ಯಚಿತ್ರ ತಯಾರಾಗಿದೆ. ಜೆಮಿನಿ ಸ್ಟುಡಿಯೋ ಮಾಲೀಕರಾದ ಎಸ್.ಎಸ್.ವಾಸನ್ ಅವರ ಬಗ್ಗೆ ನಾಗೇಶ್ ಬಾಬ ಪುಸ್ತಕ ರಚಿಸಿದ್ದಾರೆ.
ಕನ್ನಡ ಸಿನಿಮಾರಂಗಕ್ಕೆ ನೇರವಾಗಿ, ಪರೋಕ್ಷವಾಗಿ ನಾಗೇಶ್ ಬಾಬ ಅವರ ಕೊಡುಗೆ ಸ್ಮರಣೀಯ. ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ನಾಗೇಶ್ ಬಾಬ ಅವರು ಪತ್ನಿ ಶ್ಯಾಮಲಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಫೋಟೋಗಳು:
1) ನಾಗೇಶ್ ಬಾಬ

Advertisement


2) ಹರೆಯದ ದಿನಗಳಲ್ಲಿ ನಾಗೇಶ್ ಬಾಬ


3) ಆರ್.ನಾಗೇಂದ್ರ ರಾವ್ ನಿರ್ದೇಶನದ ‘ಪ್ರೇಮದ ಪುತ್ರಿ’ ಚಿತ್ರೀಕರಣದಲ್ಲಿ ನಾಗೇಶ್ ಬಾಬ (ಬಲತುದಿಯಲ್ಲಿ ಪುಸ್ತಕದಲ್ಲಿ ನೋಟ್ ಮಾಡಿಕೊಳ್ಳುತ್ತಿರುವವರು)


4) ನಾಗೇಶ್ ಬಾಬ ನಿರ್ಮಾಣ, ನಿರ್ದೇಶನದ ‘ಅನಿರೀಕ್ಷಿತ’ ಚಿತ್ರದ ಹಾಡಿನ ಧ್ವನಿಮುದ್ರಣ ಸಂದರ್ಭ. ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ, ಸಂಗೀತ ಸಂಯೋಜಕ ವಿಜಯ ಭಾಸ್ಕರ್, ನಾಗೇಶ್ ಬಾಬ ಫೋಟೋದಲ್ಲಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com