ಫಸ್ಟ್ ಲುಕ್ ಪೋಸ್ಟರ್ ಮೂಲಕ ಸುದ್ದಿ ಮಾಡುತ್ತಿದೆ “ರಿವೈಂಡು”

Published on

313 Views
Advertisement

ಫಸ್ಟ್ ಲುಕ್ ಪೋಸ್ಟರ್ ಮೂಲಕ ಸುದ್ದಿ ಮಾಡುತ್ತಿದೆ “ರಿವೈಂಡು” ರಿವೈಂಡ್ ಹೀಗೊಂದು ಶೀರ್ಷಿಕೆಯಿರುವ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಗಳು ನೆನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಾ ಹರಿದಾಡುತ್ತಿವೆ. ತೇಜ್ ಎಂಬುವ ಯುವನಟ ಮೊದಲ ಬಾರಿಗೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೇ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ವಿಶೇಷ. ಪನರೋಮಿಕ್ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ವಿನೋದ್ ಎಂಬುವವರು ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ. ಈಗಾಗಲೇ ಹಲವು ಭಾಷೆಗಳಲ್ಲಿ ನಟಿಸಿದ್ದ ತೇಜ್ ಅವರು ಮೊದಲಬಾರಿಗೆ ಈ ಚಿತ್ರದಲ್ಲಿ ನಾಯಕನಾಗಿ
ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ತಮ್ಮ ದೇಹ ದಂಡಿಸಿ ಸಿಕ್ಸ್ ಪ್ಯಾಕ್ ಮಾಡಿರುವ ತೇಜ್ ಅವರ ಪೂರ್ವ ತಯಾರಿಯೊಂದಿಗೆ ಅಖಾಡಕ್ಕೆ ಇಳಿದಿದ್ದಾರೆ. ಬೆಂಗಳೂರು ಜರ್ಮನಿ, ಸಿಂಗಾಪುರ್ ಸೇರಿದಂತೆ ವಿದೇಶಗಳಲ್ಲಿ
ಚಿತ್ರೀಕರಣ ಮಾಡಲಿದ್ದಾರಂತೆ. ಚಿತ್ರದಲ್ಲಿ ತೇಜ್ ಅವರಿಗೆ ಜೋಡಿಯಾಗಿ ಚಂದನ ರಾಘವೇಂದ್ರ ಎಂಬುವವರು ಕಾಣಿಸಿಕೊಳ್ಳಲಿದ್ದಾರೆ‌.ಚಿತ್ರರಂಗದ ಹಲವಾರು ಗಣ್ಯರು ಕಲಾವಿದರು ತಂತ್ರಜ್ಞರು ಚಿತ್ರತಂಡಕ್ಕೆ ಶುಭಕೋರಿದ್ದಾರೆ.
ಇನ್ನುಳಿದಂತೆ ಸಬೀಶ್ ಸೊಲೋಮನ್ ಅವರ ಸಂಗೀತ ಸಂಯೋಜನೆ, ಪ್ರೇಮ್ ಎಂಬುವವರ ಛಾಯಗ್ರಹಣ, ವಿನೋದ್ ಬಸವರಾಜ್ ಎಂಬುವವರ ಸಂಕಲನ ಈ ಚಿತ್ರಕ್ಕಿದೆ‌. ಡಾ.ನಾಗೇಂದ್ರ ಪ್ರಸಾದ್ ಹಾಗೂ ಮಂಜು.ಎಂ.ದೊಡ್ಡಮನಿ ಅವರು ಈ ಚಿತ್ರದ ಹಾಡುಗಳಿವೆ ಸಾಹಿತ್ಯ ಬರೆಯಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com