ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ `ಗ್ರಾಮ (Grama Kannada Movie)` ಚಿತ್ರಕ್ಕೆ ಚಾಲನೆ

Published on

829 Views
Advertisement

ಯಶ್‍ದೀಪ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೇಮಂತಕುಮಾರ್ ಅವರು ನಿರ್ಮಿಸುತ್ತಿರುವ `ಗ್ರಾಮ ( Grama Kannada Movie )` ಚಿತ್ರದ ಮುಹೂರ್ತ ಸಮಾರಂಭ ಮಾರ್ಚ್ 19ರ ಸೋಮವಾರ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನಡೆಯಿತು. ನಾಯಕ ಹಾಗೂ ನಾಯಕಿ ಕಾಡು ಮಲ್ಲೇಶ್ವರನಿಗೆ ನಮಸ್ಕರಿಸುವ ಮೊದಲ ಸನ್ನಿವೇಶಕ್ಕೆ ಹೇಮಂತಕುಮಾರ್ ಆರಂಭ ಫಲಕ ತೊರಿದರು. ಕುಮರೇಶ್ ಬಾಬು ಕ್ಯಾಮೆರಾ ಚಾಲನೆ ಮಾಡಿದರು.

ಹರಿ ಕಿರಣ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ಒಂದು ಚಿತ್ರ ನಿರ್ದೇಶಿಸಿ, ಹತ್ತಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಒದಗಿಸಿರುವ ಹರಿ ಸಂತು ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ವಿಜಯ್ ಭರಮಸಾಗರ ಅವರು ಸಂಭಾಷಣೆಯನ್ನು ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

Advertisement

ಚಿತ್ರಕ್ಕೆ 38ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಕರ್ನಾಟಕ- ಆಂದ್ರ ಪ್ರದೇಶ ಗಡಿಯ, ಚಿಂತಾಮಣಿ ಬಳಿಯ ಹಳ್ಳಿಯೊಂದರಲ್ಲಿ ಹದಿನೆಂಟು ದಿನಗಳ ಚಿತ್ರೀಕರಣ ನಡೆಯಲಿದೆ. ನಾಲ್ಕು ಹಾಡುಗಳು ಹಾಗೂ ಮೂರು ಸಾಹಸ ಸನ್ನಿವೇಶಗಳಿ ಈ ಚಿತ್ರದಲ್ಲಿದೆ.

ಕೃಷ್ಣಪ್ರಸಾದ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿಕಲ್ಯಾಣ್ ಸಂಗೀತ ನೀಡಿದ್ದಾರೆ. ಬಾಬಿ ಸಂಕಲನ, ವಿಜಯ್ ಕೃಷ್ಣ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು, ನಂದು ಅವರ ಸಾಹಸ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಪ್ರಶಾಂತ್ ಬರೆದಿದ್ದಾರೆ.

Advertisement

ಲಿಖಿತ್ ಸೂರ್ಯ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಲಹರಿ. ಸತ್ಯಪ್ರಕಾಶ್, ಸುಧಾರಾಣಿ, ಸುಮನ್, ಅವಿನಾಶ್, ಸಾಧುಕೋಕಿಲ, ರಾಮಕೃಷ್ಣ, ಶಿವರಾಮಣ್ಣ, ಕುರಿ ಪ್ರತಾಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Grama Kannada Movie

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com