“ಗುಲ್ಟು ನವೀನ್ ಈಗ ಧರಣಿ ಮಂಡಲ ಮದ್ಯದೊಳಗೆ”

Published on

248 Views

ಗುಲ್ಟು ಚಿತ್ರದ‌ ಮೂಲಕ ನಾಯಕ ನಟನಾಗಿ ಚಿತ್ರ ರಂಗಕ್ಕೆ ಎಂಟ್ರಿ ಕೊಟ್ಟ ನವೀನ್ ಮೊದಲ ಬಾರಿಗೆ ಪ್ರೇಕ್ಷಕರಲ್ಲಿ ಭರವಸೆಯ ನಟ ಎನ್ನುವುದನ್ನು ಸಾಬೀತುಪಡಿಸಿದ್ದರು. ಚಿತ್ರ ಕೂಡ ಯಶಸ್ವಿಯಾಗಿ ಪ್ರದರ್ಶನ ವಾಗಿತ್ತು.

ಈಗ ಎರಡನೇ ಚಿತ್ರವಾಗಿ ಧರಣಿ ಮಂಡಲ ಮಧ್ಯದೊಳಗೆ’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ತಯಾರಾಗಿದ್ದಾರೆ.
ಚಿತ್ರದ ಟ್ರೇಲರ್ ಅನ್ನು ಯೂಟ್ಯೂಬ್ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಗೊಳಿಸಿ ಹಾರೈಸಿದ್ದರು.
ಈಗ ನಟ ವಸಿಷ್ಠ ಸಿಂಹ ಮತ್ತಿಮ್ಮೆ ಚಿತ್ರದ ಟ್ರೇಲರ್ ಅನ್ನು ಕಲಾವಿದರ ಸಂಘದಲ್ಲಿ ಅನಾವರಣಗೊಳಿಸಿ ಚಿತ್ರ ತಂಡಕ್ಕೆ ಶುಭಕೋರಿದರು.
ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಟ್ರೇಲರ್ ಹೊತ್ತು ಬಂದ ಸಿನಿಮಾ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಈ ಟ್ರೇಲರ್ ನೋಡಿದವರಿಗೆ ಕುತೂಹಲ ಮೂಡಿಸುತ್ತದೆ.
ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು ಭರವಸೆ ಮೂಡಿಸಿದೆ. ಗುಲ್ಟು ಖ್ಯಾತಿಯ ನಟ ನವೀನ್ ಶಂಕರ್, ಐಶಾನಿ ಶೆಟ್ಟಿ ನಟಿಸಿರುವ ಈ ಚಿತ್ರವನ್ನು ಶ್ರೀಧರ್ ಶಿಕಾರಿಪುರ ನಿರ್ದೇಶನ ಮಾಡಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ನಟ ವಸಿಷ್ಠ ಸಿಂಹ ಚಿತ್ರದಲ್ಲಿ ಪ್ರತಿಯೊಂದು ಅಂಶಗಳು ಕೂಡ ಗಮನ ಸೆಳೆಯುತ್ತಿದೆ. ಯಂಗ್ ಟೀಂ ಸೇರಿಕೊಂಡು ಇಷ್ಟು ಒಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಅಂದ್ರೆ ತುಂಬಾ ಖುಷಿಯ ವಿಚಾರ. ಟ್ರೇಲರ್ ಬಹಳಾನೇ ಖುಷಿ ಕೊಡ್ತು. ಮ್ಯೂಸಿಕ್, ಡೈಲಾಗ್, ಕ್ಯಾಮೆರಾ ವರ್ಕ್ ತುಂಬಾನೇ ಚೆನ್ನಾಗಿ ಮೂಡಿ ಬಂದಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದ್ರು.

ಬಹುತಾರಾಗಣದ ‘ಉತ್ತರಕಾಂಡ’ಕ್ಕೆ ಪೂಜೆಯ ಮೆರಗು

ಚಿತ್ರದ ನಿರ್ದೇಶಕ ಶ್ರೀಧರ್ ಶಿಕಾರಿಪುರ ಮಾತನಾಡಿ ಇದು ನನ್ನ ನಿರ್ದೇಶನದ ಮೊದಲ ಸಿನಿಮಾ. ನಮ್ಮ ಸುತ್ತಮುತ್ತ ಇರುವವರ ಕಥೆಯೇ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾ. ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಕಥಾಹಂದರದ ಸಿನಿಮಾವಿದು. ಬಾಕ್ಸಿಂಗ್ ನಲ್ಲಿ ಅಪಾರ ಆಸಕ್ತಿ ಇರುವ ಹುಡುಗನ ಬದುಕಿನಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆಯಲಾದ ಕಥೆ ಚಿತ್ರದಲ್ಲಿದೆ. ಪ್ರೀತಿ, ಸೆಂಟಿಮೆಂಟ್ ಎಳೆಯನ್ನೂ ಹೊತ್ತ ಈ ಚಿತ್ರ ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ ಎಂದು ತಿಳಿಸಿದ್ರು.
ಗುಳ್ಟು ನಂತರ ಕೇಳಿದ ಇಂಟ್ರಸ್ಟಿಂಗ್ ಸಬ್ಜೆಕ್ಟ್ ಇರುವ ಕಥೆ ಇದಾಗಿದೆ. ಚಿತ್ರದಲ್ಲಿ ಆದಿ ಪಾತ್ರವನ್ನು ನಿರ್ವಹಿಸಿದ್ದೇನೆ. ಬಾಕ್ಸಿಂಗ್ ನಲ್ಲಿ ಸಾಧನೆ ಮಾಡಬೇಕು ಎಂದುಕೊಂಡಿರುವ ಹುಡುಗನ ಪಾತ್ರ. ಗುಳ್ಟು ಸಿನಿಮಾಗಿಂತ ಡಿಫ್ರೆಂಟ್ ಆದ ಪಾತ್ರವನ್ನು ಇಲ್ಲಿ ನಿರ್ವಹಿಸಿದ್ದೇನೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಡಿಸೆಂಬರ್ 2ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ನಾಯಕ ನಟ ನವೀನ್ ಶಂಕರ್ ತಿಳಿಸಿದ್ರು.

ನಿರ್ದೇಶಕರು ಕ್ರೈಂ ಡ್ರಾಮಾ ಸಿನಿಮಾ ಎಂದಾಗ ನಾನು ಸ್ವಲ್ಪ ಯೋಚನೆ ಮಾಡ್ದೆ, ಆದ್ರೆ ಕಥೆ ಕೇಳಿ ತುಂಬಾ ಖುಷಿ ಆಯ್ತು. ಇಲ್ಲಿವರೆಗೂ ನಾನು ಮಾಡಿರುವ ಪಾತ್ರಕ್ಕಿಂತ ಕಂಪ್ಲೀಟ್ ಡಿಫ್ರೆಂಟ್ ಆಗಿರುವ ಪಾತ್ರ ನಿರ್ವಹಿಸಿದ್ದೇನೆ. ಶ್ರೇಯ ಎನ್ನುವ ಪಾತ್ರವನ್ನು ನಿರ್ವಹಿಸಿದ್ದೇನೆ. ಡೋಂಟ್ ಕೇರ್ ಆಟಿಟ್ಯೂಡ್ ಇರುವ ಬೋಲ್ಡ್ ಹುಡುಗಿ ಪಾತ್ರ. ಈ ಚಿತ್ರದ ಭಾಗವಾಗಿರೋದಕ್ಕೆ ತುಂಬಾ ಖುಷಿ ಇದೆ. ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಎಲ್ಲರೂ ಈ ಚಿತ್ರಕ್ಕೆ ಸಪೋರ್ಟ್ ಮಾಡಿ ಎಂದು ನಾಯಕ ನಟಿ ಐಶಾನಿ ಶೆಟ್ಟಿ ತಮ್ಮ ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

ನಿರ್ಮಾಪಕ ಓಂಕಾರ್ ಮಾತನಾಡಿ ಸಿನಿಮಾ ನಿರ್ಮಾಣದ ಜೊತೆಗೆ ಡಿಸ್ಕೊ ಎಂಬ ನಟೋರಿಯಸ್ ಗ್ಯಾಂಗ್ ಸ್ಟಾರ್ ಪಾತ್ರ ಮಾಡಿದ್ದೇನೆ. ಸಿನಿಮಾದ ಸ್ಕ್ರೀನ್ ಪ್ಲೇ ತುಂಬಾ ಡಿಫ್ರೆಂಟ್ ಆಗಿದೆ. ಕನ್ನಡದಲ್ಲಿ ಇದು ಮೊದಲ ಪ್ರಯತ್ನ ಆದ್ರಿಂದ ಸಿನಿಮಾ ನಿರ್ಮಾಣ ಮಾಡಲು ಒಪ್ಪಿಕೊಂಡೆ. ಚಿತ್ರದ ಪ್ರತಿ ವಿಭಾಗದಲ್ಲೂ ಎಲ್ಲರೂ ಪರಿಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ನೋಡಿ ಸಪೋರ್ಟ್ ಮಾಡಿ ಎಂದು ಕೇಳಿಕೊಂಡ್ರು.
ಚಿತ್ರದಲ್ಲಿ ಯಶ್ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡು, ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭವಿ ಒಳಗೊಂಡ ತಾರಾಗಣವಿದೆ. ಬಾಕ್ಸ್ ಆಫೀಸ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಒಂಕಾರ್ ಸಿನಿಮಾವನ್ನು ನಿರ್ಮಾಣ ಮಾಡಿದ್ದು. ವೀರೇಂದ್ರ ಕಂಚನ್, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಕೀರ್ತನ್ ಪೂಜಾರಿ ಕ್ಯಾಮೆರಾ ವರ್ಕ್, ರೋಣದ ಬಕ್ಕೇಶ್, ಕಾರ್ತಿಕ್ ಚೆನ್ನೋಜಿರಾವ್ ಸಂಗೀತ ನಿರ್ದೇಶನ, ಉಜ್ವಲ್ ಚಂದ್ರ ಸಂಕಲನ ಚಿತ್ರಕ್ಕಿದೆ. ಡಿಸೆಂಬರ್ 2ರಂದು ಪ್ರೇಕ್ಷಕರ ಮನಗೆಲ್ಲಲು ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ.

More Buzz

BuzzGalleryHistoryVideos 5 hours ago

ವೀಡಿಯೋ ನೋಡಿ – ರಿಷಭ್ ಶೆಟ್ಟಿಗೆ ಸೆಲ್ಯೂಟ್ ಮಾಡಿ ಸಂಭ್ರಮಿಸಿದ ಆರ್.ಸಿ.ಬಿ ಯ ಸ್ಟಾರ್ ಬೌಲರ್ ಸಿರಾಜ್!!

BuzzComedyfilm of the dayFull MoviesGalleryHistoryTrailersVideos 5 hours ago

ಸ್ಯಾಂಡಲ್ ವುಡ್ ನಲ್ಲಿ ರೀ-ರಿಲೀಸ್ ಟ್ರೆಂಡ್!!

Buzzfilm of the dayFull MoviesGalleryHistoryKollywood BuzzShort FilmsTollywood BuzzTrailersVideosWeb Series 3 days ago

ಪ್ರಭಾಸ್ ನ ಕಲ್ಕಿ ಚಿತ್ರಕ್ಕೆ ಧ್ವನಿ ನೀಡಿದ ಮಹಾನಟಿ ಕೀರ್ತಿ ಸುರೇಶ್!!

BuzzFull MoviesGalleryHistoryTollywood BuzzTrailersVideos 3 days ago

ಟಾಲಿವುಡ್ ಸ್ಟಾರ್ ಸೂರ್ಯನಿಗೆ ನಾಯಕಿಯಾದ ಮಂಗಳೂರಿನ ಬೆಡಗಿ ಪೂಜಾ ಹೆಗ್ಡೆ!!

BuzzFull MoviesTollywood BuzzTrailersVideos 3 days ago

ಡಾರ್ಲಿಂಗ್ ಪ್ರಭಾಸ್ ಜೀವನದಲ್ಲಿ ತುಂಬಾ ವಿಶೇಷವಾದ ವ್ಯಕ್ತಿಯ ಎಂಟ್ರಿ- ಇವರೇ ಆ ವ್ಯಕ್ತಿ

BuzzVideos 4 days ago

ರಾಜಕೀಯಕ್ಕೆ ರಶ್ಮಿಕಾ ಮಂದಣ್ಣ ಎಂಟ್ರಿ???

Buzzfilm of the dayFull MoviesTrailers 4 days ago

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ಮ್ಯಾಕ್ಸ್ ಸಿನಿಮಾ ಟ್ರೆಂಡ್ ಆಗಿದ್ದೇಕೆ??

Trailers 4 months ago

UITheMovie – First Look Teaser | Upendra | Lahari Films

Buzz 5 months ago

TOXIC – Rocking Star Yash | Geetu Mohandas | KVN Productions

Buzz 8 months ago

Ghost Official Trailer Starring Dr.Shivarajkumar

Trailers 9 months ago

KADDHA CHITRA – TRAILER | VIJAY RAGHAVENDRA | SUHAS KRISHNA

Trailers 9 months ago

Tatsama Tadbhava Official Trailer | Meghana Raj Sarja | Prajwal Devaraj| Vasuki Vaibhav

Copyright ©2024 . All Rights Reserved. privacy | terms Whatsapp: 9538193653 Email: hello@flixoye.com