ಕಪಿಲ್ ನಿರ್ದೇಶನದ ಮತ್ತೊಂದು ಚಿತ್ರ ಹಸಿವು ಮತ್ತು ಅರಿವು

Published on

350 Views
Advertisement

ಕಳೆದ 2 ದಶಕಗಳಿಂದ ನೂರಕ್ಕೂ ಹೆಚ್ಚು ಚಲನ ಚಿತ್ರಗಳಿಗೆ ಕೊರಿಯಾಗ್ರಾಫ್ ಮಾಡುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಒಬ್ಬ ಪ್ರತಿಭಾವಂತ ನೃತ್ಯ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಪ್ರತಿಭೆ ಎಂ.ಆರ್. ಕಪಿಲ್. ಮಳೆಬಿಲ್ಲು ಇವರ ನೃತ್ಯ ನಿರ್ದೇಶನದಲ್ಲಿ ಮೂಡಿಬರುತ್ತಿರುವ ನೂರನೇ ಚಿತ್ರವಾಗಿದೆ. ಕಪಿಲ್ ಈ ಹಿಂದೆ ಹಳ್ಳಿ ಸೊಗಡು ಎಂಬ ಹೆಸರಿನಲ್ಲಿ ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡರ ಬಯೋಪಿಕ್ ಆಧಾರಿತ ಚಲನಚಿತ್ರವನ್ನು ನಿರ್ದೇಶನ ಮಾಡಿದ್ದರು. ಈಗ ಕಪಿಲ್ ಅವರು ತಮ್ಮ ನಿರ್ದೇಶನದ ಎರಡನೇ ಚಿತ್ರವನ್ನು ಆರಂಭಿಸುತ್ತಿದ್ದಾರೆ. ಹಸಿವು ಮತ್ತು ಅರಿವು ಎಂಬ ಹೆಸರಿನ ಈ ಚಿತ್ರದಲ್ಲಿ ಪ್ರಪಂಚದಲ್ಲಿ ಹಸಿವು ಎನ್ನುವುದು ಎಷ್ಟು ಮಹತ್ತರವಾದುದು. ಬಡವರ ಜೀವನದಲ್ಲಿ ಹಸಿವು ಎಷ್ಟೆಲ್ಲ ಕೆಲಸಗಳನ್ನು ಮಾಡಿಸುತ್ತದೆ. ಹಸಿವಿನ ಮಹತ್ವ ಹಾಗೂ ಅದರ ಅನ್ನದ ಪ್ರಾಮುಖ್ಯತೆ ಬಗ್ಗೆ ಅರಿವನ್ನು ಮೂಡಿಸುವ ಕಥಾಹಂದರ ಈ ಚಿತ್ರದಲ್ಲಿರುತ್ತದೆ. ಈ ಚಿತ್ರದ ಪರಿಕಲ್ಪನೆಯ ಜೊತೆಗೆ ನಿರ್ದೇಶನವನ್ನು ಕಪಿಲ್ ಅವರೇ ಮಾಡುತ್ತಿದ್ದಾರೆ. ಅಲ್ಲದೆ ಈ ಚಿತ್ರದ ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತಿದ್ದಾರೆ. ಊಟ ಮಾಡುವಾಗ ಅನ್ನವನ್ನು ಅರ್ಧಕ್ಕೆ ಬಿಡಬೇಡಿ, ಅನ್ನವನ್ನು ಬಿಸಾಕಬೇಡಿ, ಅನ್ನಕ್ಕೆ ಬೆಲೆಕೊಡಿ ಎನ್ನುವ ಸಂದೇಶವನ್ನು ಸಾರುವಂಥ ಚಲನಚಿತ್ರ ಇದಾಗಿದೆ. ಮುಂದಿನವಾರ ಈ ಚಿತ್ರದ ಹಾಡುಗಳ ಧ್ವನಿಮುದ್ರಣ ಕಾರ್ಯ ನಡೆಯಲಿದೆ.

Advertisement

ಭಾನು ಪೃಥ್ವಿ 100 ಮಾರ್ಕ್ ಫಿಲಂಸ್ ಲಾಂಛನದಲ್ಲಿ ಶ್ರೀಮತಿ ಶೋಭಾವತಿ ಕಪಿಲ್ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸಿ.ನಾರಾಯಣ್, ಶ್ರೀನಾಥ್‍ರಾವ್ ಅವರ ಸಂಗೀತ, ಭುವನೇಶ್ವರಿ ಬಲರಾಮ್ ಅವರ ಸಂಗೀತ, ಬಿ.ಆರ್. ನರಸಿಂಹ ಮೂರ್ತಿ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಬರೆದಿದ್ದಾರೆ. ಉದಯಲೇಖಾ ಅವರ ಸಾಹಿತ್ಯ ಈ ಚಿತ್ರಕ್ಕಿದೆ. ಗುಬ್ಬಿ ನಟರಾಜ್, ಕೃಷ್ಣಮೂರ್ತಿ ತಳಾಲು ಈ ಚಿತ್ರದ ಉಳಿದ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com