ಕನ್ನಡದ ರಂಗಭೂಮಿ, ಕಿರುತೆರೆ, ಚಲನಚಿತ್ರರಂಗದ ಹಿರಿಯ ನಟ ಹೆಚ್.ಜಿ.ಸೋಮಶೇಖರ (86)ನಿಧನ

Published on

316 Views

ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದ ಎಚ್.ಜಿ.ಸೋಮಶೇಖರ್ ರವರು ಬ್ಯಾಂಕ್ ಅಧಿಕಾರಿಯೂ ಆಗಿದ್ದರು. ಅನೇಕ ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು. ಹಿರಿಯ ನಟ ದತ್ತಣ್ಣ ನವರ ಅಣ್ಣನಾಗಿರುವ ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ ಮೂಲಕ. ಖ್ಯಾತ ನಟ ಅನಿಲ್ ಠಕ್ಕರ್ರವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಗಂಭೀರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ರಾಯರು ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು.

ರವೀ ನಿರ್ದೇಶನದ ‘ಮಿಥಿಲೆಯ ಸೀತೆಯರು’ ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವೀಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು.

ಕೆನರಾ ಬ್ಯಾಂಕ್ನಲ್ಲಿ ಉನ್ನತ ಅಧಿಕಾರಿಯಾಗಿದ್ದು ನಿವೃತ್ತಿ ಹೊಂದಿದ ರಾಯರಿಗೆ ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ನಿಜವಾದ ಕಾಯಕವಾಯಿತು ಸೋಮಶೇಖರ್ ರವರ ಬದುಕಿನ ಅನುಭವ ಕಥನವು ಪ್ರಕಟವಾಗಿದೆ. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ರಾಯರು ತಮ್ಮ 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಮ್ಮನ್ನು ಅಗಲಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com