ಇನ್ಸ್ ಪೆಕ್ಟರ್ ವಿಕ್ರಂ ಈವಾರ ತೆರೆಗೆ

Published on

491 Views

ಇದೇ ಮೊದಲಬಾರಿಗೆ ಪ್ರಜ್ವಲ್ ದೇವರಾಜ್ ಪೋಲೀಸ್ ಪಾತ್ರದಲ್ಲಿ
ಕಾಣಿಸಿಕೊಂಡಿರುವ ಚಿತ್ರ ‘ಇನ್ಸ್ ಪೆಕ್ಟರ್ ವಿಕ್ರಂ’ ಈವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ.
ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳಾಗಿದ್ದು,
ಸುಮಾರು ೩೦ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ, ಆದರೂ
ಒಂದು ಮಾಸ್ ಚಿತ್ರದಲ್ಲಿ ಅಭಿನಯಿಸಿಲ್ಲವೆಂಬ ಕೊರಗು ನನಗಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ. ತುಂಟಾಟ ಮಾಡುವವನಿಗೆ ಪೋಲೀಸ್ ಹುದ್ದೆ ಸಿಕ್ಕರೆ ಅದು ಯಾವ ರೀತಿ ಇರುತ್ತದೆ ಎಂಬುದನ್ನು ಈ ಚಿತ್ರದಲ್ಲಿ ನೋಡಬಹುದು. ಆದರೂ ಆತ ತನ್ನ ಕೆಲಸವನ್ನು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡುತ್ತಾನೆ ಎಂದು ನಾಯಕ ಪ್ರಜ್ವಲ್ ಹೇಳಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಸಂಗೀತ ನಿರ್ದೇಶನ ಮಾಡಿರುವ ಅನೂಪ್ ಸೀಳನ್ ಒಂದು ಹಾಡಿಗೆ ದನಿಯಾಗಿದ್ದಾರೆ.
ನಟ ಕಾಶಿನಾಥ್ ಅವರ ಗರಡಿಯಲ್ಲಿ ಪಳಗಿರುವ ಶ್ರೀನರಸಿಂಹ ಈ
ಚಿತ್ರಕ್ಕೆ ಆಕ್ಷನ್-ಕಟ್ ಹೇಳಿದ್ದಾರೆ. ಬೆಂಗಳೂರು, ಗೋಕರ್ಣ
ಮುಂತಾದ ಕಡೆಗಳಲ್ಲಿ ಇನ್ಸ್ಪೆಕ್ಟರ್ ವಿಕ್ರಂ ಚಿತ್ರದ
ಚಿತ್ರೀಕರಣ ನಡೆಸಲಾಗಿದೆ. ಈ ಹಿಂದೆ ಪುಷ್ಪಕ ವಿಮಾನ ಚಿತ್ರವನ್ನು ನಿರ್ಮಾಣ ಮಾಡಿದ್ದ ವಿಖ್ಯಾತ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.ಗುರು ಕಶ್ಯಪ್ ಸಂಭಾಷಣೆ, ನವೀನ್ ಕುಮಾರ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಎ.ಸತೀಶ್ ಕಲೆ ಈ ಚಿತ್ರಕ್ಕಿದೆ. ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ವಿನೋದ್ ಸಾಹಸ ನಿರ್ದೇಶನ ಈ ಚಿತ್ರ ಕ್ಕಿದೆ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಜೊತೆ ನಾಯಕಿಯಾಗಿ ಭಾವನಾ ಮೆನನ್ ಕಾಣಿಸಿಕೊಂಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com