ಪುನೀತ್ ಹಾಗೂ ಶಿವಣ್ಣ ಒಂದೇ ಸಿನಿಮಾದಲ್ಲಿ ನಟಿಸುವ ಕಾಲ ಬಂತು!

Published on

351 Views

ಸೆಂಚುರಿ ಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ `ಟಗರು’ ಹವಾ ಕ್ರೀಯೆಟ್ ಮಾಡಿರೋದು ಎಲ್ಲರಿಗೂ ಗೊತ್ತೇ ಇರುವ ವಿಷಯ. ೀಗ ಟಗರು 100 ದಿನ ಪೂರೈಸಿದೆ. ಸಿನಿಮಾ ನೂರು ದಿನ ಪೂರೈಸಿದ ಸಂದರ್ಭದಲ್ಲಿ ಚಿತ್ರತಂಡ ಅಭಿಮಾನಿಗಳಿಗೆ ಶುಭ ಸುದ್ದಿಯನ್ನು ನೀಡಿದೆ. ಇದೇ ಚಿತ್ರ ತಂಡದಿಂದ ಟಗರು-2 ಚಿತ್ರ ನಿರ್ಮಾಣವಾಗಲಿದ್ದು ಶಿವರಾಜ್ ಕುಮಾರ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಜೊತೆಯಾಗಿ ನಟಿಸಲಿದ್ದಾರೆ ಎಂದು ನಿರ್ದೇಶಕ ಸೂರಿ ತಿಳಿಸಿದ್ದಾರೆ.

ಇವತ್ತು ಶಿವರಾಜ್‍ಕುಮಾರ್ ಅಭಿಮಾನಿ ಸಂಘಗಳ ವತಿಯಿಂದ ಸಂತೋಷ್ ಚಿತ್ರಮಂದಿರದಲ್ಲಿ ನೂರನೇ ದಿನದ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಟಗರು ಕಟೌಟ್‍ಗೆ ಹೂವಿನಹಾರ ಹಾಕಿ ಪಟಾಕಿ ಸಿಡಿಸಿದ ಅಭಿಮಾನಿಗಳು ಚಿತ್ರತಂಡವನ್ನ ಸಂತೋಷ್ ಚಿತ್ರಮಂದಿರಕ್ಕೆ ಬರಮಾಡಿಕೊಂಡರು. ಕೊನೆಗೂ ಅಭಿಮಾನಿಗಳ ಆಸೆ ಈಡೇರುವ ಕಾಲ ಕೂಡಿ ಬಂದಂತಾಗಿದೆ ಇಬ್ಬರೂ ಒಂದೇ ಚಿತ್ರದಲ್ಲಿ ನಟಿಸುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ

Copyright ©2026 . All Rights Reserved. privacy | terms Whatsapp: 9538193653 Email: hello@flixoye.com