‘ಜೀವ್ನಾನೇ ನಾಟ್ಕ ಸಾಮಿ‌…’ ಅಂತಾರೆ ನಿರ್ದೇಶಕ ರಾಜು ಭಂಡಾರಿ‌ ರಾಜವರ್ತ…

Published on

593 Views
Advertisement

ಕನ್ನಡತಿ ಧಾರಾವಾಹಿಯ ನಾಯಕನಟ ಕಿರಣ್ ರಾಜ್ ನಾಯಕನಾಗಿ ‘ಜೀವಾನ್ನೇ ನಾಟ್ಕ ಸಾಮಿ…’ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇವರ ಜೊತೆಗೆ ಇನ್ನೊಬ್ಬ‌ ನಾಯಕ ಸರಿಗಮಪ ಖ್ಯಾತಿಯ ಶ್ರೀ ಹರ್ಷ ನಟಿಸುತ್ತಿದ್ದಾರೆ. ರಂಗಭೂಮಿ ಹಿನ್ನಲೆಯಿಂದ ಬಂದಿರುವ ರಾಜು ಭಂಡಾರಿ ರಾಜವರ್ತ ಈ ಸಿನಿಮಾವನ್ನು ‌ನಿರ್ದೇಶಿಸಿದ್ದಾರೆ. ಈ ಚಿತ್ರದ ಟೀಸರ್, ಟ್ರೈಲರ್ ಜೊತೆಗೆ ಲಿರಿಕಲ್‌ ಹಾಡು ಬಿಡುಗಡೆಗೊಳಿಸಿ ಪತ್ರಿಕಾಗೋಷ್ಠಿ ನಡೆಸಿತು ಚಿತ್ರತಂಡ. ಆಗಸ್ಟ್ 19 ರಂದು ಸಿನಿಮಾ ಬಿಡುಗಡೆಯಾಗಲಿದ್ದು, ಅದರ ತಯಾರಿಯಲ್ಲಿದೆ ಚಿತ್ರತಂಡ.

Advertisement

ಇದು ಮಹಾಭಾರತದ ಉಪಕಥೆಯನ್ನು ಆಧಾರವಾಗಿಟ್ಟುಕೊಂಡು ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳನ್ನು ಕಥಾವಸ್ತುವನಿಟ್ಟುಕೊಂಡು ಈ ಚಿತ್ರ‌ ನಿರ್ಮಾಣ ಮಾಡಿದ್ದೇವೆ. ಪಾಸಿಟಿವ್ ಹಾಗೂ ನೆಗಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳಹೊರಟಿದ್ದೇವೆ. ಕಿರಣ್ ರಾಜ್ ಹಾಗೂ ಶ್ರೀಹರ್ಷ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ತಮಿಳು, ತುಳು ಸಿನಿಮಾಗಳಲ್ಲಿ ನಟಿಸಿರುವ ಪವಿತ್ರ ಕೋಟ್ಯಾನ್ ಹಾಗೂ ಅನಿಕ ರಮ್ಯ ಈ ಚಿತ್ರದ‌ಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

Advertisement

ಇದೊಂದು ಸಂಪೂರ್ಣ ಮನರಂಜನಾ ಚಿತ್ರ. ಸ್ವಲ್ಪ ಟ್ರಾಜಿಡಿ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ. ಸಿನಿಮಾ ನೋಡಿ ಹರಸಿ ಎಂದಿದ್ದಾರೆ ನಿರ್ದೇಶಕ ರಾಜು ಭಂಡಾರಿ.
ಕಿರಣ್ ರಾಜ್ ಸಹ ತಮ್ಮ ‌ಪಾತ್ರ ವಿವರಣೆ ನೀಡುತ್ತಾ, ಇಂತಹ ಒಳ್ಳೆಯ ತಂಡದಲ್ಲಿ ಅಭಿನಯಿಸಿದ್ದ ಸಂತೋಷ ನನಗಿದೆ. ನನ್ನ ಧಾರಾವಾಹಿ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಗೆಲಿಸುತ್ತಾರೆಂಬ ನಂಬಿಕೆಯಿದೆ ಎಂದಿದ್ದಾರೆ.

Advertisement

“ಸರಿಗಮಪ” ದಲ್ಲಿ ತಮ್ಮ ಗಾಯನದ ಮೂಲಕ ಮನೆಮಾತಾಗಿದ್ದ, ಶ್ರೀಹರ್ಷ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ ಚಿತ್ರದಲ್ಲಿ ಬರೀ ನಟನೆಯಷ್ಟೇ ಅಲ್ಲ. ಒಂದು ಹಾಡನ್ನು ಹಾಡಿದ್ದೇನೆ ಅಂತಾರೆ ಶ್ರೀಹರ್ಷ.
ರಾಜಶೇಖರ್ ಶಿರಹಟ್ಟಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com