‘ವೀರಪುತ್ರ’ ನಿಗೆ ಜ್ಯೂಡಾ ಸ್ಯಾಂಡಿ ಸಂಗೀತ.

Published on

338 Views

ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆಯಾದ ‘ಸಪ್ಲಿಮೆಂಟರಿ’ ಚಿತ್ರ ವಿಮರ್ಶಕರ ಹಾಗೂ ನೋಡುಗರ ಮನಗೆದ್ದಿತ್ತು. ಆ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ನಿರ್ಮಾಪಕರಾದ ಗುರು ಬಂಡಿ‌ ಹಾಗೂ ನಿರ್ದೇಶಕ ಡಾ|| ದೇವರಾಜ್ ಅವರ ಕಾಂಬಿನೇಶನ್ ನಲ್ಲಿ ‘ವೀರಪುತ್ರ’ ಚಿತ್ರ ನಿರ್ಮಾಣವಾಗುತ್ತಿದೆ.

ತನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಈ ಚಿತ್ರದ ನಾಯಕರಾಗಿ ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಪ್ರೋಮೊ ಬಿಡುಗಡೆಯಾಗಿದ್ದು, ಯೂಟ್ಯೂಬ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ.
ಯುವ ಸಂಗೀತ ನಿರ್ದೇಶಕ ಜ್ಯೂಡಾ ಸ್ಯಾಂಡಿ ಈ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಸಂಗೀತ ನೀಡಲಿರುವ ಜ್ಯೂಡಾ ಸ್ಯಾಂಡಿ ಅವರು ಸಂಗೀತ ರಸಿಕರಿಗೆ ಮನೋರಂಜನೆಯ ರಸದೌತಣ ನೀಡುವುದಾಗಿ ಹೇಳಿದ್ದಾರೆ.
ಡಿಸೆಂಬರ್ ನಲ್ಲಿ ‘ವೀರಪುತ್ರ’ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com