ಕೇಶವ ವಿಟ್ಲ ಇನ್ನಿಲ್ಲ

Published on

651 Views
Advertisement

ಕೇಶವ ವಿಟ್ಲ ಇನ್ನಿಲ್ಲ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ನಿಧನರಾಗಿದ್ದಾರೆ.

ಕಿಡ್ನಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದವರಾದ ಇವರು ‘ಮುಂಗಾರು’ ಪತ್ರಿಕೆ ಮೂಲಕ ಪತ್ರಿಕಾ ಛಾಯಾಗ್ರಹಣ ಆರಂಭಿಸಿದ್ದರು. ಕ್ಯಾಮೆರಾ ಕಣ್ಣಿನಿಂದ ಹೊಸ ಲೋಕ ತೋರಿಸಿಕೊಟ್ಟಿದ್ದ ಕೇಶವ ವಿಟ್ಲ Facets of Karnataka – A Pictorial Journey ಕೃತಿಯ ಮೂಲಕ ಕರ್ನಾಟಕದ ಹೊಸ ಒಳನೋಟಗಳನ್ನು ಸೆರೆಹಿಡಿದಿದ್ದಾರೆ.
ರಾಜ್ಯ ಪ್ರವಾಸೋದ್ಯಮ‌ ಇಲಾಖೆ ಈ ಸಂಪುಟವನ್ನು ಪ್ರಕಟಿಸಿತ್ತು.

Advertisement

ಗ್ರಾಮೀಣ ಪ್ರದೇಶವಾದ ವಿಟ್ಲದಲ್ಲಿ 1961ರಲ್ಲಿ ಜನಿಸಿದ ಕೇಶವ ವಿಟ್ಲ ಅವರು , 1984 ರಲ್ಲಿ ಮುಂಗಾರು ಪತ್ರಿಕೆಯ ಮೂಲಕ ಪತ್ರಿಕಾ ಛಾಯಾಗ್ರಾಹಕರಾಗಿ ವೃತ್ತಿ ಜೀವನ ಆರಂಭಿಸಿದರು. ಅನಂತರ 1996 ರಿಂದ ಬೆಂಗಳೂರಿನಲ್ಲಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕಾ ಬಳಗದಲ್ಲಿ ಹಲವು ವರ್ಷಗಳ ಕಾಲ ಛಾಯಗ್ರಾಹಕರಾಗಿ ಸೇವೆ ಸಲ್ಲಿಸಿ, ತದನಂತರ ಫ್ರೀಲಾನ್ಸ್ ಪತ್ರಿಕಾ ಛಾಯಗ್ರಾಹಕರಾಗಿ ದಿ ಟೆಲಿಗ್ರಾಫ್ , ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಗಳಿಗೆ ಛಾಯಾಚಿತ್ರಗಳನ್ನು ಒದಗಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ಶ್ರೇಷ್ಠ ಸುದ್ದಿ ಛಾಯಾಗ್ರಾಹಕ ಪ್ರಶಸ್ತಿ , ಬೆಂಗಳೂರು ಪ್ರೆಸ್ ಕ್ಲಬ್‍ನ ಜೀವಮಾನ ಸಾಧನೆಗಾಗಿ ಪ್ರಶಸ್ತಿ , ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಬಲಿಯೇಂದ್ರ ಪುರಸ್ಕಾರ , ತುಳುನಾಡ ಸಿರಿ ಪ್ರಶಸ್ತಿ ಪುರಸ್ಕೃತರಾಗಿರುವ ಕೇಶವ ವಿಟ್ಲ ಅವರು ಹಲವು ಏಕವ್ಯಕ್ತಿ ಛಾಯಾಚಿತ್ರ ಪ್ರದರ್ಶನಗಳನ್ನು ಆಯೋಜಿಸಿದವರು.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com