ಕಂಠೀರವ ಸ್ಟುಡಿಯೋ ದಲ್ಲಿ ಮುಹೂರ್ತ ನೆರವೇರಿಸಿಕೊಂಡ ಕೆಜಿಎಫ್ ‌ಚಾಪ್ಟರ್ ೨

Published on

569 Views

ಹೊಂಬಾಳೆ ಫಿಲ್ಮ್ಸ್ ಲಾಂಛನದಲ್ಲಿ ಮೂಡಿಬಂದಿದ್ದ ಕೆಜಿಎಫ್ ಸಿನಿಮಾ ಇಡೀ ಭಾರತೀಯ ಚಿತ್ರರಂಗ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿತ್ತು. ದೊಡ್ಡ ಮಟ್ಟದಲ್ಲಿ ಯಶಸ್ಸು ಗಳಿಸಿದ ಕೆಜಿಎಫ್ ಎಲ್ಲರನ್ನು ಬೆರಗಾಗುವಂತೆ ಮಾಡಿರುವ ವಿಚಾರ ಎಲ್ಲರಿಗೂ‌ ತಿಳಿದಿದೆ.


ಕೆಜಿಎಫ್ ಚಿತ್ರವನ್ನು ಅಷ್ಟು ದೊಡ್ಡ ಮಟ್ಟಕ್ಕೆ ಕೊಂಡೊಯ್ದಿದ್ದ ನಿರ್ಮಾಪಕ ವಿಜಯ ಕಿರಗಂದೂರು ಅವರ ನಿರ್ಮಾಣದಲ್ಲಿ ಕೆ.ಜಿ.ಎಫ್. ಚಾಪ್ಟರ್೨ ಇಂದು ಕಂಠೀರವ ಸ್ಟುಡಿಯೋದಲ್ಲಿ ಮುಹೂರ್ತ ಆಚರಿಸಿಕೊಂಡಿದೆ. ನಿರ್ದೇಶಕ ಪ್ರಶಾಂತ್ ನೀಲ್ ರವರ ತಾಯಿ ಶ್ರೀಮತಿ ಭಾರತಿ ಸುಭಾಷ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ನಿರ್ಮಾಪಕ ವಿಜಯ್ ಕಿರಗಂದೂರು ಅವರ ಸಹೋದರ ಮಂಜಣ್ಣ ಕ್ಲಾಪ್ ಮಾಡಿದರು. ಕೆ.ಜಿ.ಎಫ್ ಚಾಪ್ಟರ್೨ ಚಿತ್ರ ಏಪ್ರಿಲ್ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.


ಪ್ರಶಾಂತ್ ನೀಲ್ ಕಥೆ ಚಿತ್ರಕಥೆ, ನಿರ್ದೇಶನ, ಸಂಭಾಷಣೆ ಪ್ರಶಾಂತ್ ನೀಲ್, ಚಂದ್ರಮೌಳಿ, ಕೆ ಭುವನ್ ಗೌಡ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ಶಿವಕುಮಾರ್ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಕಾರ್ತಿಕ್ ಮತ್ತು ರಾಮರಾವ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ, ಚಂಪಕಧಾಮ ಬಾಬು, ಕುಮಾರ್, ಗಗನ್ ಮೂರ್ತಿ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.


ತಾರಾಗಣದಲ್ಲಿ ರಾಕಿಂಗ್ ಸ್ಟಾರ್ ಯಶ್, ಅನಂತ್ ನಾಗ್, ಶ್ರೀನಿಧಿ ಶೆಟ್ಟಿ, ಮಾಳವಿಕಾ, ಮಾಸ್ಟರ್ ಅನಮೋಲ್, ನಾಗಾಭರಣ, ಗೋವಿಂದೇಗೌಡ, ಅವಿನಾಶ್, ರಾಮ್, ಲಕ್ಕಿ, ಅಯ್ಯಪ್ಪ ಶರ್ಮ ಮುಂತಾದವರಿದ್ದಾರೆ.

Copyright ©2024 . All Rights Reserved. privacy | terms Whatsapp: 9538193653 Email: hello@flixoye.com