3ಡಿ ಯಲ್ಲಿ ಬರಲಿದೆ ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರ

ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಚಿತ್ರದ ಟೀಸರ್ ದುಬೈನ ಬುರ್ಜ್ ಖಲೀಫಾ ಕಟ್ಟಡದಲ್ಲಿ ಬಿಡುಗಡೆಗೊಂಡು ಸಾಕಷ್ಟು ಕುತೂಹಲ ಹುಟ್ಟಿಸಿರುವ ‘ವಿಕ್ರಾಂತ್ ರೋಣ’ ಚಿತ್ರವನ್ನು 3ಡಿ ವರ್ಷನ್ ನಲ್ಲಿ ಬಿಡುಗಡೆ ಮಾಡುವುದಾಗಿ ಈಗಾಗಲೇ ಘೋಷಣೆ ಮಾಡಿದ್ದು, ಈ ಬಗ್ಗೆ ಸುದೀಪ್ ಅವರೇ ಸುಳಿವು ನೀಡಿದ್ದಾರೆ. ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ 25 ವರ್ಷಗಳನ್ನು ಪೂರೈಸಿದ ಸಂಭ್ರವನ್ನು ದುಬೈನಲ್ಲಿ ಆಚರಿಸಿ, ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಈ ಸಂಭ್ರಮವನ್ನು ಆಚರಿಸಿಕೊಂಡಿರುವ ಸುದೀಪ್‌ರವರು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಇದು ಕಿಚ್ಚನ ಅಭಿಮಾನಿಗಳಲ್ಲಿ ಇನ್ನಷ್ಟು ನಿರೀಕ್ಷೆಯನ್ನು ಹುಟ್ಟಿಸಿದೆ.