`ಕೃಷ್ಣ ಗಾರ್ಮೆಂಟ್ಸ್` ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರ್ಣ

Published on

430 Views
Advertisement

ಸುಮುಖ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಶ್ರೀನಿವಾಸಮೂರ್ತಿ ಅವರು ನಿರ್ಮಿಸುತ್ತಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಸನದಲ್ಲಿ 8 ದಿನ ಹಾಗೂ ಬೆಂಗಳೂರು ಸುತ್ತಮುತ್ತ 10 ದಿನಗಳ ಚಿತ್ರೀಕರಣ ನಡೆದಿದೆ. ಈ ಹಂತದ ಚಿತ್ರೀಕರಣದಲ್ಲಿ ರಾಜೇಶ್ ನಟರಂಗ, ಭಾಸ್ಕರ್ ನೀನಾಸಂ, ಚಂದು(ಲಕ್ಷ್ಮೀ ಬಾರಮ್ಮ), ರಶ್ಮಿತ ಮುಂತಾದ ಕಲಾವಿದರು ಅಭಿನಯಿಸಿದ್ದರು. ಮೊದಲ ಹಂತದ ಚಿತ್ರೀಕರಣದಲ್ಲಿ ಮಾತಿನ ಭಾಗದ ಚಿತ್ರೀಕರಣದೊಂದಿಗೆ ಒಂದು ಹಾಡಿನ ಚಿತ್ರೀಕರಣ ಸಹ ನಡೆದಿದೆ.

ಪ್ರೀತಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರು `ಮನೆಮಗಳು`, `ಯಶೋಧರ` ಸೇರಿದಂತೆ ಹತ್ತು ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ ಹಾಗೂ 2015-16ನೆ ಸಾಲಿನ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿದ್ದ `ಹೆಮ್ಮರ` ಚಿತ್ರವನ್ನು ಸಿದ್ದು ಅವರೆ ನಿರ್ದೇಶಿಸಿದ್ದಾರೆ.

Advertisement

`ಶ್ರೀಮಾನ್ ಶ್ರೀಮತಿ` ಧಾರಾವಾಹಿ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, `ಬ್ರಹ್ಮಾಸ್ತ್ರ` ಧಾರಾವಾಹಿಯ ರಶ್ಮಿತ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಚಂದು(ಲಕ್ಷ್ಮೀ ಬಾರಮ್ಮ), ರಾಜೇಶ್ ನಟರಂಗ, ಹನುಮಂತ ರಾಜು, ರೇವತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಘು ಧನ್ವಂತ್ರಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಚಿದಾನಂದ್ ಅವರ ಛಾಯಾಗ್ರಹಣವಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com