ಗಣೇಶನ ಸನ್ನಿಧಿಯಲ್ಲಿ `ಕೃಷ್ಣ ಗಾರ್ಮೆಂಟ್ಸ್` ಆರಂಭ

Published on

425 Views
Advertisement

ಕೆ.ಎಸ್.ರಕ್ಷಿತ್ ಎಂಟರ್‍ಟೈನ್‍ಮೆಂಟ್ ಹಾಗೂ ಸುಮುಖ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಶ್ರೀನಿವಾಸಮೂರ್ತಿ ಅವರು ನಿರ್ಮಿಸುತ್ತಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ಮೋದಿ ಆಸ್ಪತ್ರೆ ಬಳಿಯ ಗಣೇಶನ ದೇವಸ್ಥಾನದಲ್ಲಿ ಮಾರ್ಚ್ 19ರ ಸೋಮವಾರ ನೆರವೇರಿತು. ನಾಯಕ ಹಾಗೂ ನಾಯಕಿ ದೇವರಿಗೆ ನಮಿಸುವ ಮೊದಲ ಸನ್ನಿವೇಶಕ್ಕೆ ಜಯಕುಮಾರ್ ಆರಂಭ ಫಲಕ ತೋರಿದರು. ಕೆ.ಶ್ರೀನಿವಾಸಮೂರ್ತಿ ಹಾಗೂ ಕೆ.ಎಸ್.ರಶ್ಮಿ ಕ್ಯಾಮೆರಾ ಚಾಲನೆ ಮಾಡಿದರು. ಇದೇ ತಿಂಗಳ 21ರಿಂದ ಶ್ರವಣಬೆಳಗೊಳದಲ್ಲಿ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ.

ಪ್ರೀತಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರು `ಮನೆಮಗಳು`, `ಯಶೋಧರ` ಸೇರಿದಂತೆ ಹತ್ತು ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ ಹಾಗೂ 2015-16ನೆ ಸಾಲಿನ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿದ್ದ `ಹೆಮ್ಮರ` ಚಿತ್ರವನ್ನು ಸಿದ್ದು ಅವರೆ ನಿರ್ದೇಶಿಸಿದ್ದಾರೆ.

Advertisement

`ಶ್ರೀಮಾನ್ ಶ್ರೀಮತಿ` ಧಾರಾವಾಹಿ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, `ಬ್ರಹ್ಮಾಸ್ತ್ರ` ಧಾರಾವಾಹಿಯ ರಶ್ಮಿತ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜೇಶ್ ನಟರಂಗ, ಹೆಚ್.ಎಂ.ಟಿ ವಿಜಯ್, ರಾಮರಾವ್, ಪ್ರಮಿಳಾ ಸುಬ್ರಮಣ್ಯ, ವರ್ಧನ್ ತೀರ್ಥಹಳ್ಳಿ, ಕಿರಣ್ ಹೊನ್ನಾವರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ರಘು ಧನ್ವಂತ್ರಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಬೆಂಗಳೂರು, ಶ್ರವಣಬೆಳಗೊಳ, ಚೆನ್ನರಾಯಪಟ್ಟಣ, ಹಾಸನ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com