ಮಾರ್ಚ್ 19ರಿಂದ `ಕೃಷ್ಣ ಗಾರ್ಮೆಂಟ್ಸ್` ಆರಂಭ

Published on

675 Views
Advertisement

ಸುಮುಖ ಪಿಕ್ಚರ್ಸ್ ಲಾಂಛನದಲ್ಲಿ ಕೆ.ಶ್ರೀನಿವಾಸಮೂರ್ತಿ ಅವರು ನಿರ್ಮಿಸುತ್ತಿರುವ `ಕೃಷ್ಣ ಗಾರ್ಮೆಂಟ್ಸ್` ಎಂಬ ನೂತನ ಚಿತ್ರ ಮಾರ್ಚ್ 19ರಿಂದ ಆರಂಭವಾಗಲಿದೆ.
ಪ್ರೀತಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರು `ಮನೆಮಗಳು`, `ಯಶೋಧರ` ಸೇರಿದಂತೆ ಹತ್ತು ಧಾರಾವಾಹಿಗಳನ್ನು ನಿರ್ದೇಶಿಸಿದ್ದಾರೆ ಹಾಗೂ 2015-16ನೆ ಸಾಲಿನ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿದ್ದ `ಹೆಮ್ಮರ` ಚಿತ್ರವನ್ನು ಸಿದ್ದು ಅವರೆ ನಿರ್ದೇಶಿಸಿದ್ದಾರೆ.

`ಶ್ರೀಮಾನ್ ಶ್ರೀಮತಿ` ಧಾರಾವಾಹಿ ಖ್ಯಾತಿಯ ಭಾಸ್ಕರ್ ನೀನಾಸಂ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, `ಬ್ರಹ್ಮಾಸ್ತ್ರ` ಧಾರಾವಾಹಿಯ ರಕ್ಷಿತ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾಜೇಶ್ ನಟರಂಗ, ಹೆಚ್.ಎಂ.ಟಿ ವಿಜಯ್, ರಾಮರಾವ್, ಪ್ರಮಿಳಾ ಸುಬ್ರಮಣ್ಯ, ವರ್ಧನ್ ತೀರ್ಥಹಳ್ಳಿ, ಕಿರಣ್ ಹೊನ್ನಾವರ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

ರಘು ಧನ್ವಂತ್ರಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಬೆಂಗಳೂರು, ಶ್ರವಣಬೆಳಗೊಳ, ಚೆನ್ನರಾಯಪಟ್ಟಣ, ಹಾಸನ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com