ಭಾನುವಾರ ಬಹುನಿರೀಕ್ಷೀತ ಕುರುಕ್ಷೇತ್ರ ಚಿತ್ರದ ಹಾಡುಗಳು

Published on

453 Views

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಕುರುಕ್ಷೇತ್ರ
ಹೈ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಸಿನಿಮಾ. ಕನ್ನಡ ಚಿತ್ರರಂಗದಲ್ಲಿ
ಕುತೂಹಲ ಮೂಡಿಸಿರುವ ಈ ಚಿತ್ರದಲ್ಲಿ ರೆಬಲ್‌ ಸ್ಟಾರ್‌ ಅಂಬರೀಶ್‌, ಕ್ರೇಜಿಸ್ಟಾರ್‌ ರವಿಚಂದ್ರನ್‌, ಅರ್ಜುನ್‌ ಸರ್ಜಾ, ನಟಿ ಭಾರತಿ ವಿಷ್ಣುವರ್ಧನ್, ನಿಖಿಲ್ ಕುಮಾರ್‌ ಹರಿಪ್ರಿಯಾ, ಮೇಘನಾ ರಾಜ್‌, ಸಾಯಿಕುಮಾರ್‌, ರವಿಶಂಕರ್‌, ಸೋನು ಸೂದ್‌, ಸೇರಿದಂತೆ ಬಹುದೊಡ್ಡ ತಾರಬಳಗ ಚಿತ್ರದಲ್ಲಿ ನಟಿಸಿದ್ದಾರೆ.

ಕನ್ನಡ ಮಾತ್ರವಲ್ಲ ತೆಲುಗು ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರಲಿದೆ.
ಚಿತ್ರಕ್ಕೆ ಸೆನ್ಸಾರ್ ಮುಗಿದಿದ್ದು ಸೆನ್ಸಾರ್ ಮಂಡಳಿಯು ಚಿತ್ರವನ್ನು ನೋಡಿ ಮೆಚ್ಚಿ
ಯು/ಎ ಸರ್ಟಿಫಿಕೇಟ್ ನೀಡಿದೆ. ಚಿತ್ರಕ್ಕೆ ವಿ.ಹರಿಕೃಷ್ಣ ಅವರು ಸಂಗೀತ
ಸಂಯೋಜನೆ ಮಾಡಿದ್ದು ಹಾಡುಗಳು ಇದೇ ಭಾನುವಾರ ನಡೆಯಲಿರುವ
ಅದ್ದೂರಿ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿವೆ. ಈ ಚಿತ್ರವನ್ನು ನಾಗಣ್ಣ
ಅವರು ನಿರ್ದೇಶನ ಮಾಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com