ಖುಷಿ, ವಿವೇಕ್ ಸಿಂಹ ಜೋಡಿಯ ‘ಸ್ಪೂಕಿ ಕಾಲೇಜ್’ ಫಸ್ಟ್ ಲುಕ್…

Published on

410 Views
Advertisement

‘ರಂಗಿತರಂಗ’, ‘ಅವನೇ ಶ್ರೀಮನ್ನಾರಾಯಣ’ ಚಿತ್ರಗಳ ಖ್ಯಾತಿಯ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈಗ ‘ಸ್ಪೂಕಿ ಕಾಲೇಜ್’ ಎಂಬ ಹೊಸ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಭರತ್.ಜಿ. ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಚಿತ್ರ ಇದಾಗಿದ್ದು, ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿರುವ ಚಿತ್ರತಂಡ ಇದೇ ಬರುವ ನವೆಂಬರ್ ಮೊದಲ ವಾರದಿಂದ ಚಿತ್ರದ ಚಿತ್ರೀಕರಣ ಶುರುಮಾಡಲು ಫ್ಲಾನ್ ಮಾಡಿಕೊಂಡಿದೆ. ಶ್ರೀದೇವಿ ಎಂಟರ್ ಟೈನರ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ‘ಸ್ಪೂಕಿ ಕಾಲೇಜ್’ ಚಿತ್ರ ಮುಖ್ಯ ಭೂಮಿಕೆಯಲ್ಲಿ ವಿವೇಕ್ ಸಿಂಹ, ದಿಯಾ ಖ್ಯಾತಿಯ ಖುಷಿ ರವಿ, ಪೃಥ್ವಿ ರಾಷ್ಟ್ರಕೂಟ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಪ್ರಕಾಶ್ ಬೆಳವಾಡಿ, ಹನುಮಂತೇ ಗೌಡ, ರಘು ರಮಣಕೊಪ್ಪ, ವಿಜಯ್ ಚೆಂಡೂರ್, ಅಶ್ವಿನ್ ಹಾಸನ್, ಎಂ.ಕೆ.ಮಠ, ಅರವಿಂದ್ ಬೋಳಾರ್ ಅಭಿನಯಿಸುತ್ತಿದ್ದಾರೆ.

ಚಿತ್ರದ ಮೊದಲ ಹಂತದ ಚಿತ್ರೀಕರಣ ಧಾರವಾಡದಲ್ಲಿ 103 ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ಆರಂಭವಾಗಲಿದ್ದು, ದ್ವಿತೀಯ ಹಂತದ ಚಿತ್ರೀಕರಣ ದಾಂಡೇಲಿಯದ ದಟ್ಟ ಅರಣ್ಯ ಪ್ರದೇಶದಲ್ಲಿ ನಡೆಯಲಿದೆಯಂತೆ. ಇದು ಕಾಲೇಜೊಂದರಲ್ಲಿ ನಡೆಯುವ ಕಥೆಯಾಗಿದ್ದು, ಕಾಲೇಜಿನಲ್ಲಿ ದ್ವೆವದ ಕಾಟ ಇದೆ ಎಂದು ತೋರಿಸಕ್ಕೆ ಹೊರಟಿದ್ದಾರೆ ನಿರ್ದೇಶಕ ಭರತ್. ಇದು ಹಾರರ್, ಕಾಮಿಡಿ ಹಾಗೂ ಸೈಕಾಲಾಜಿಕಲ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ‘ಸ್ಪೂಕಿ ಕಾಲೇಜು’ ಚಿತ್ರಕ್ಕೆ ಮನೋಹರ್ ಜೋಶಿ ಛಾಯಾಗ್ರಹಣವಿದ್ದು, ಶ್ರೀಕಾಂತ್ ರವರ ಸಂಕಲನವಿದ್ದು, ಚಿತ್ರದ ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ಸಯೋಜಿಸಿದ್ದಾರೆ.

Advertisement

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com