ಕನ್ನಡಕ್ಕೆ ಕಂಬ್ಯಾಕ್ ಲಕ್ಷ್ಮಿ ರೈ … ಬಿರುಸಿನಿಂದ ಸಾಗಿದ ‘ಝಾನ್ಸಿ’ ಶೂಟಿಂಗ್

Published on

473 Views
Advertisement

ಚಿತ್ರದ ಚಿತ್ರೀಕರಣ ಮುಗಿಸಿಕೊಂಡಿರುವ ‘ಝಾನ್ಸಿ’ ಚಿತ್ರದಲ್ಲಿ ಅದರಲ್ಲಿ ನಾಲ್ಕು ಸಾಹಸ ಸನ್ನಿವೇಶ ಹಾಗೂ ಒಂದು ಚೇಸಿಂಗ್ ಸನ್ನಿವೇಶವನ್ನು ಒಳಗೊಂಡಿದೆ. ಈ ಚಿತ್ರಕ್ಕಾಗಿ ನಟಿ ಲಕ್ಷ್ಮಿ ರಾಯ್ ಮಾರ್ಷಲ್ ಆರ್ಟ್​ ಸಹ ಕಲಿತಿದ್ದಾರೆ.
ಕನ್ನಡತಿ ಲಕ್ಷ್ಮಿ ರಾಯ್ ಝಾನ್ಸಿ ಕನ್ನಡ ಚಿತ್ರದ ಮೂಲಕ ಕಂಬ್ಯಾಕ್ ಮಾಡಿದ್ದಾರೆ.

ಸಾಹಸಮಯ ಚಿತ್ರ ಝಾನ್ಸಿಯ ಚಿತ್ರೀಕರಣ ಇತ್ತೀಚೆಗೆ ಮುಂಬೈನಲ್ಲಿ ನಡೆದಿದ್ದು, ಈ ವೇಳೆ ಅದ್ಬುತ ಥ್ರಿಲ್ಲರ್ ಸನ್ನಿವೇಶ ಚಿತ್ರೀಕರಿಸಲಾಗಿದೆ.
ಝಾನ್ಸಿ ಚಿತ್ರಕ್ಕೆ 35 ದಿನಗಳ ಕಾಲ ಶೂಟಿಂಗ್ ನಡೆದಿದ್ದು, ಚಿತ್ರದಲ್ಲಿ ಅದರಲ್ಲಿ ನಾಲ್ಕು ಸಾಹಸ ಸನ್ನಿವೇಶ ಹಾಗೂ ಒಂದು ಚೇಸಿಂಗ್ ಸನ್ನಿವೇಶವನ್ನು ಒಳಗೊಂಡಿದೆ. ಈ ಚಿತ್ರಕ್ಕಾಗಿ ನಟಿ ಲಕ್ಷ್ಮಿ ರಾಯ್ ಮಾರ್ಷಲ್ ಆರ್ಟ್​ ಸಹ ಕಲಿತಿದ್ದಾರೆ.
ಹಿರಿಯ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರ 500 ನೇ ಸಿನಿಮಾ ಇದಾಗಿದ್ದು, ಸಂಗೀತ ನಿರ್ದೇಶಕ ಎಂ ಎನ್ ಕೃಪಾಕರ್ ಅವರಿಗೆ ಇದು 50ನೇ ಚಿತ್ರ ಎನ್ನುವುದು ಮತ್ತೊಂದು ವಿಶೇಷ.
ನಿರ್ದೇಶಕ ಪಿ.ವಿ.ಎಸ್ ಗುರುಪ್ರಸಾದ್ ಝಾನ್ಸಿ ಆಗಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಲಕ್ಷ್ಮಿ ರಾಯ್ ಅನ್ನು ತೆರೆಯ ಮೇಲೆ ತರುತ್ತಿದ್ದಾರೆ. ಈ ಮೊದಲು ‘ಮರ್ಯಾದ ರಾಮಣ್ಣ’ ಸಿನಿಮಾ ಮಾಡಿದ್ದ ಗುರುಪ್ರಸಾದ್ ಇದೀಗ ಆ್ಯಕ್ಷನ್ ಸಿನಿಮಾವನ್ನು ನೋಡುಗರ ಮುಂದೆ ತರುತ್ತಿದ್ದಾರೆ. ಈ ಚಿತ್ರಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆಯ ಜೊತೆಗೆ ಸಂಭಾಷಣೆ ಬರೆದಿದ್ದಾರೆ.
ಒಂದು ಹಾಡಿಗೆ ನೃತ್ಯ ನಿರ್ದೇಶಕ ಧನ್ ಕುಮಾರ್ ಕೊರಿಯೋಗ್ರಫಿ ಮಾಡಿದ್ದಾರೆ. ಮುಖೇಶ್​ ತಿವಾರಿ, ವೀರ್ ಹನಿಫ್, ರವಿ ಕಾಳೆ ನೆಗೆಟಿವ್ ರೋಲ್​ನಲ್ಲಿ ನಟಿಸಿದ್ದು, ಝಾನ್ಸಿ ಚಿತ್ರಕ್ಕೆ ವೀರೇಶ್ ಛಾಯಾಗ್ರಹಣ ಮಾಡಿದ್ದಾರೆ.
ಡ್ರಗ್ಸ್, ಲ್ಯಾಂಡ್ ಮಾಫಿಯಾ ಹಾಗೂ ಇನ್ನಿತರ ವಿಚಾರಗಳನ್ನು ಒಳಗೊಂಡ ‘ಝಾನ್ಸಿ’ ಮಾಸ್ ಹಾಗೂ ಕುಟುಂಬ ಸಮೇತ ನೋಡುವಂತಹ ಚಿತ್ರ ಎಂದು ನಿರ್ದೇಶಕರು ಹೇಳಿದ್ದಾರೆ.
ಭವಾನಿ ಎಂಟರ್​​ಟೇನ್ಮೆಂಟ್​​ ಅಡಿ ಮುಂಬಯಿ ಮೂಲದ ರಾಜೇಶ್ ಕುಮಾರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಸವರಾಜ್ ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com