ನೀಲಕಂಠ’ನಾಗಿ ಬರುತ್ತಿದ್ದಾರೆ ಮಾಸ್ಟರ್​ ಮಹೇಂದ್ರನ್​; ಹುಟ್ಟುಹಬ್ಬಕ್ಕೆ ಸ್ಪೆಷಲ್​ ಸಾಂಗ್​

Published on

713 Views
Advertisement

ತಮಿಳು ಚಿತ್ರರಂಗದಲ್ಲಿ ಮಾಸ್ಟರ್​ ಮಹೇಂದ್ರನ್​ ಜನಪ್ರಿಯ ಹೆಸರು. ಕೇವಲ ಮೂರು ವರ್ಷದವರಿದ್ದಾಗ ಬಣ್ಣ ಹಚ್ಚಿದ ಮಹೇಂದ್ರನ್​, ಆ ನಂತರ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಾಲನಟರಾಗಿ ಕಾಣಿಸಿಕೊಂಡವರು. ತಮ್ಮ ಅಭಿನಯದಿಂದ ನಾಲ್ಕು ಬಾರಿ ಅತ್ಯುತ್ತಮ ಬಾಲನಟ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡವರು. ‘ವಿಳಾ’ ಎಂಬ ಚಿತ್ರದ ಮೂಲಕ ಹೀರೋ ಆದ ಮಹೇಂದ್ರನ್​, ಇದೀಗ ಮೊದಲ ಬಾರಿಗೆ ‘ನೀಲಕಂಠ’ ಎಂಬ ಪ್ಯಾನ್​ ಇಂಡಿಯಾ ಚಿತ್ರದಲ್ಲಿ ನಟಿಸಿದ್ದಾರೆ.

Advertisement

ಎಲ್​.ಎಸ್​. ಪ್ರೊಡಕ್ಷನ್ಸ್​ ಬ್ಯಾನರ್​ನಲ್ಲಿ ಶ್ರವಣ್ ಜಿ ಕುಮಾರ್ ಎಂ.ಶ್ರೀನಿವಾಸುಲು ಮತ್ತು ಡಿ.ವೇಣುಗೋಪಾಲ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರವು ಆಕ್ಷನ್​ ಡ್ರಾಮಾ ಆಗಿದ್ದು, ನಾ. ಅರುಣ್​ ಕಾರ್ತಿಕ್​ ಬರೆದು ನಿರ್ದೇಶಸಿದ್ದಾರೆ. ಈ ಚಿತ್ರವನ್ನು ಸಂಪೂರ್ಣವಾಗಿ ಹಳ್ಳಿಯಲ್ಲಿ ಚಿತ್ರೀಕರಿಸಲಾಗಿರುವುದು ವಿಶೇಷ. ಇಂದು ಮಹೇಂದ್ರನ್​ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ‘ಆಕು ಪಾಕು’ ಎಂಬ ಹಾಡನ್ನು ಹುಟ್ಟುಹಬ್ಬರ ಕಾಣಿಕೆಯಾಗಿ ಬಿಡುಗಡೆ ಮಾಡಲಾಗುತ್ತಿದೆ.

Advertisement

ಮಹೇಂದ್ರನ್ ಜೊತೆಗೆ ಯಶ್ನಾ ಚೌಧರಿ ಮತ್ತು ನೇಹಾ ಪಠಾಣ್​ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ವಿಶೇಷ ಪಾತ್ರದಲ್ಲಿ ಸ್ನೇಹಾ ಉಲ್ಲಾಳ್​ ಸಹ ಇದ್ದು, ರಾಮ್ಕಿ, ಬಬ್ಲೂ ಪೃಥ್ವಿರಾಜ್, ಶುಭಲೇಖಾ ಸುಧಾಕರ್, ಸತ್ಯ ಪ್ರಕಾಶ್, ಚಿತ್ರಮ್ ಸೀನು, ಕನ್ನಡದ ಜ್ಯೋತಿ ರೈ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
‘ನೀಲಕಂಠ’ ಚಿತ್ರವು ಸದ್ಯ ಪೋಸ್ಟ್​ ಪ್ರೊಡಕ್ಷನ್​ ಹಂತದಲ್ಲಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ.

Advertisement

More Buzz

Trailers 5 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 5 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com