ಜೂ 3ಕ್ಕೆ ‘ಮೆಟಡೋರ್’ ರಿಲೀಸ್…’ಮೆಟಡೋರ್’ನಲ್ಲಿಯೇ ಊರ್ ಊರ್ ಸುತ್ತಿ ಪ್ರಮೋಷನ್ ಮಾಡಿದ ಚಿತ್ರತಂಡ
ಜೂನ್ 3ರಿಂದ ಕನ್ನಡ ಬೆಳ್ಳಿತೆರೆ ಮೇಲೆ ಮೆಟಡೋರ್ ಪಯಣ ಶುರುವಾಗಲಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾ ಥಿಯೇಟರ್ ಗೆ ಲಗ್ಗೆ ಇಡಲು ಅಣಿಯಾಗಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿತು.
ನಿರ್ಮಾಪಕ ಕಿರಣ್ ಕುಮಾರ್, ಇಂಜಿನಿಯರಿಂಗ್ ಬ್ಯಾಗ್ರೌಂಡ್ ನಮ್ಮದು. ಒಟ್ಟಿಗೆ ಶಾರ್ಟ್ ಮೂವೀಗಳನ್ನು ಮಾಡಿ ನಂತ್ರ ಸಿನಿಮಾ ಮಾಡುವ ಕನಸು ಹೊತ್ತು ಈಗ ಸಿನಿಮಾ ಮಾಡಿದ್ದೇವೆ. ನಮ್ಮ ಚಿತ್ರದಲ್ಲಿ ಒಳ್ಳೆ ಕಂಟೆಂಟ್ ಇದೆ. ಬೀದಿನಾಟಕ ಮೂಲಕ ರಾಜ್ಯಾದ್ಯಂತ ಸಿನಿಮಾ ಪ್ರಚಾರ ಮಾಡಿದ್ದೇವೆ ಎಂದು ತಿಳಿಸಿದರು.
ನಿರ್ದೇಶಕ ಸುದರ್ಶನ್, ಕಲಾವಿದರು ಹೊಸಬರು. ನಾಟಕದ ಹಿನ್ನೆಲೆಯುಳ್ಳವರು. ಎಲ್ಲರೂ ನಮ್ ಸ್ನೇಹಿತರು. ಸಿನಿಮಾದಲ್ಲಿ ಐದು ಕಥೆ ಇದೆ. ಹೈಪರ್ ಲಿಂಕ್ ರೀತಿ. ಕಾಮಿಡಿ, ಥ್ರಿಲ್ಲರ್ ಎಲ್ಲಾ ಬಗೆ ಕಥೆ ಇದೆ. ಜೂನ್ 3ಕ್ಕೆ ಸಿನಿಮಾ ಬರ್ತಿದೆ. ಎಲ್ಲರೂ ಸಪೋರ್ಟ್ ಮಾಡಿ ಎಂದರು.
ಮೆಟಡೋರ್ ಸಿನಿಮಾ ರಿಲೀಸ್ ಗೆ ಕ್ಷಣಗಣನೆ ಶುರುವಾಗಿದ್ದು, ಹೀಗಾಗಿ ಚಿತ್ರತಂಡ ಭರ್ಜರಿ ಪ್ರಮೋಷನ್ ಗೆ ಇಳಿದಿದೆ. ಮೆಟಡೋರ್ ವಾಹನಕ್ಕೆ ಸಿನಿಮಾದ ಪೋಸ್ಟರ್ ಅಂಟಿಸಿ, ಈ ಮೆಟಡೋರ್ ಮೂಲಕವೇ ರಾಜ್ಯಾದ್ಯಂತ ಪ್ರಮೋಷನ್ ನಡೆಸ್ತಿದೆ.
ಐದು ಕಥೆಯುಳ್ಳ ಹೈಪರ್ ಲಿಂಕ್ ಸಿನಿಮಾವಾಗಿರುವ ಮೆಟಡೋರ್ ಚಿತ್ರಕ್ಕೆ ಸುದರ್ಶನ್ ಜಿ ಶೇಖರ್ ನಿರ್ದೇಶನ ಮಾಡಿದ್ದು, ಈ ಹಿಂದೆ ಇವರು 13ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ಕಿರಣ್, ರವಿ ಮೈಸೂರು, ಅರ್ಚನಾ ಮಹೇಶ್, ಮೋಹನ್ ಬಾಬು ಸೇರಿದಂತೆ ಹೊಸ ತಾರಾಬಳಗ ಸಿನಿಮಾದಲ್ಲಿದೆ.
ಓಂ ಸ್ಟುಡಿಯೋ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ಕಿರಣ್ ಕುಮಾರ್ ಎಸ್ ಹೆಚ್ ಬಂಡವಾಳ ಹೂಡಿದ್ದು, ತಂಗಾಳಿ ನಾಗರಾಜ್ ಸಂಗೀತ, ಗೋಪಿನಾಥ್ ಕ್ಯಾಮೆರಾ, ಕುಮಾರ್ ಸಿಎಚ್ ಸಂಕಲನ ಚಿತ್ರಕ್ಕಿದೆ.